ಶಿವಮೊಗ್ಗ :
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಈಗಾಗಲೇ ರಾಜ್ಯದ ಅನೇಕ ಜನಪ್ರತಿನಿಧಿಗಳಿಗೆ ಶಾಕ್ ಕೊಟ್ಟಿದ್ದಂತ ಕೊರೋನಾ, ಕಳೆದ ನಿನ್ನೆ ಯಷ್ಟೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆಯವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು.
ನನಗೆ ಇಂದು ಕರೊನಾ ಸೋಂಕು ದೃಡ ಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ . ಸದ್ಯಕ್ಕೆ ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ದಾಖಲಾಗಿ…
Posted by K S Eshwarappa Sharanappa on Tuesday, September 1, 2020
ಈ ಕುರಿತಂತೆ ಫೇಸ್ ಬುಕ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನನಗೆ ಇಂದು ಕರೊನಾ ಸೋಂಕು ದೃಡ ಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ . ಸದ್ಯಕ್ಕೆ ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ ಹಾರೈಕೆಯಿಂದ ಶೀಘ್ರ ಗುಣಮುಖನಾಗುವ ವಿಶ್ವಾಸ ನನಗಿದೆ ಎಂಬುದಾಗಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ