ಬೆಂಗಳೂರು :
ಈಗಾಗಲೇ ಒಮ್ಮೆ ಕೊರೋನಾ ಪಾಸಿಟಿವ್ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು, ಗುಣಮುಖರಾಗಿ ಬಂದಿದ್ದಂತಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ 2ನೇ ಬಾರಿ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಈ ಕುರಿತಂತೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಜ್ವರದ ಹಿನ್ನಲೆಯಲ್ಲಿ ಇಂದು ತಪಾಸಣೆಗೆ ಒಳಪಟ್ಟಾಗ ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಬಂದಿರುತ್ತದೆ. ಅಲ್ಪ ಪ್ರಮಾಣದಲ್ಲಿ ರೋಗ ಲಕ್ಷಣಗಳಿರುವುದರಿಂದ ವೈದ್ಯರ ಸಲಹೆಯಂತೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ಸಂಪರ್ಕಕ್ಕೆ ಬಂದಿದ್ದವರು ಕ್ವಾರಂಟೈನ್ ನಲ್ಲಿದ್ದು, ಒಮ್ಮೆ ಪರೀಕ್ಷಿಸಿಕೊಳ್ಳಿ ಎಂದು ಕೋರುತ್ತೇನೆ ಎಂದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ