ಬೆಂಗಳೂರು :
ಕೋವಿಡ್ ಲಸಿಕೆ ಕೊರತೆಯಿಂದಾಗಿ ಮೇ 1ರಂದು 18ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ನೀಡಿಕೆ ಅನುಮಾನ ಎಂದು ತಿಳಿಸಿವೆ.
ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿದೆ. ಇದರ ನಡುವೆ ದೇಶದಲ್ಲಿ ಕೋವಿಡ್ ಲಸಿಕೆ ಅಭಾವ ಆರಂಭವಾಗಿದ್ದು, ಪ್ರಮುಖವಾಗಿ ರಾಜ್ಯದಲ್ಲಿ ಮೇ 1ರಿಂದ ಲಸಿಕೆ ಸಿಗುವುದು ಅನುಮಾನ ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ರವಿಕುಮಾರ್ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೇ 1ರಿಂದ ಕೊರೊನಾ ಲಸಿಕೆ ಸಿಗುವುದು ಅನುಮಾನ. ರಾಜ್ಯ ಸರ್ಕಾರ 1 ಕೋಟಿ ಕೋವಿಡ್ ಲಸಿಕೆಗೆ ಆರ್ಡರ್ ನೀಡಿದೆ. ಆದರೆ ಸರ್ಕಾರ ಕೊಟ್ಟ ಆರ್ಡರ್ ಮೇ 1ರೊಳಗೆ ಸಿಗುವುದು ಸಾಧ್ಯವಿಲ್ಲ. ಹಾಗಾಗಿ ಈಗಿರುವ ಪರಿಸ್ಥಿತಿ ಗಮನಿಸಿದರೆ ಮೇ 1ರಿಂದ ಲಸಿಕೆ ಅಭಿಯಾನ ಆರಂಭಿಸುವುದು ಅನುಮಾನ. ರಾಜ್ಯಕ್ಕೆ ಲಸಿಕೆ ಲಭ್ಯವಾದ ಕೂಡಲೇ ಅಭಿಯಾನ ಆರಂಭಿಸುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ