ಕೊರೊನಾ ವೈರಸ್ ತಡೆಗೆ ರಾಜ್ಯ ಸರ್ಕಾರದಿಂದ `ಐತಿಹಾಸಿಕ ಹೆಜ್ಜೆ’!

ಬೆಂಗಳೂರು :

      ವಿಶ್ವದಾದ್ಯಂತ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ನಡುವೆ ಕರ್ನಾಟಕ ಸರ್ಕಾರವು ಕೊರೊನಾ ವೈರಸ್ ತಡೆಗೆ ಮತ್ತೊಂದು ಐತಿಹಾಸಿಕ ಹೆಜ್ಜೆ ಇಟ್ಟಿದೆ.

      ಕೇಂದ್ರ ಸರ್ಕಾರದ ಸಂಸ್ಥೆ ಆಗಿರುವ ಐಸಿಎಂಆರ್ ಕೊಟ್ಟಿರುವ ಅನುಮತಿ ಮೇರೆಗೆ ಬೆಂಗಳೂರಲ್ಲಿ ಕ್ಯಾನ್ಸರ್ ಚಿಕಿತ್ಸೆ ಆಸ್ಪತ್ರೆ ಹೆಚ್‍ಸಿಜಿ ಪ್ಲಾಸ್ಮಾ ಥೆರಪಿಯ ಪ್ರಯೋಗ ಕೈಗೊಳ್ಳಲಿದೆ.

      ಕೊರೊನಾದಿಂದ ಗುಣಮುಖರಾದವರೊಬ್ಬರು ತಮ್ಮ ರಕ್ತದ ಪ್ರತಿರೋಧಕ ಕಣಗಳನ್ನು ದಾನ ಮಾಡುತ್ತಾರೆ. ಅವರಿಂದ ಪ್ರತಿರೋಧಕ ಕಣಗಳನ್ನು ಪಡೆದು ಕೊರೊನಾ ಸೋಂಕಿತ ವ್ಯಕ್ತಿಯ ರಕ್ತಕ್ಕೆ ಸೇರಿಸಲಾಗುತ್ತದೆ. ಈ ಚಿಕಿತ್ಸೆಯೇ ಪ್ಲಾಸ್ಮಾ ಥೆರಪಿಯಾಗಿದೆ.

      ರಾಜ್ಯದಲ್ಲಿ ಕೊರೊನಾ ಸೋಂಕಿತ ರೋಗಿಗಳಿಗೆ ಇಂದಿನಿಂದ ಪ್ಲಾಸ್ಮಾ ಥೆರಪಿ ಆರಂಭವಾಗುತ್ತಿದ್ದು, ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಚಾಲನೆ ನೀಡಿದ್ದಾರೆ.

     ಪ್ಲಾಸ್ಮಾ ಥೆರಪಿಗೆ ಚಾಲನೆ ನೀಡಿ ಮಾತನಾಡಿದ ಸಚಿವ ಸುಧಾಕರ್, ರಾಜ್ಯದಲ್ಲಿ ಹೊಸ ಪ್ರಯತ್ನಕ್ಕೆ ಚಾಲನೆ ನೀಡಿದ್ದು, ಇದೊಂದು ಐತಿಹಾಸಿಕ ದಿನ ಎಂದು ಬಣ್ಣಿಸಿದರು. ಕೆಲ ರಾಜ್ಯಗಳಲ್ಲಿ ಮಾಡದ ಕೆಲಸವನ್ನು ನಮ್ಮ ರಾಜ್ಯದಲ್ಲಿ ಮಾಡಲಾಗುತ್ತಿದೆ. ಇದರಿಂದ ರೋಗಿಗಳು ಗುಣಮುಖರಾಗಲಿದ್ದಾರೆಂಬುದು ವೈದ್ಯಕೀಯವಾಗಿ ನಮ್ಮ ನಂಬಿಕೆ ಎಂದು ಅಭಿಪ್ರಾಯಪಟ್ಟರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ