ಪರಪ್ಪನ ಅಗ್ರಹಾರದ 30 ಕೈದಿಗಳಿಗೆ ಕೊರೋನಾ ಪಾಸಿಟಿವ್!!

ಬೆಂಗಳೂರು:

    ರಾಜಧಾನಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ 30 ವಿಚಾರಣಾಧೀನ ಕೈದಿಗಳಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ. 

     ಇತ್ತೀಚೆಗೆ ಜೈಲು ಸೇರಿದ್ದ ಸುಮಾರು 400 ವಿಚಾರಣಾಧೀನ ಕೈದಿಗಳ ಪೈಕಿ 150 ಮಂದಿಗೆ ರ‍್ಯಾಂಡಮ್ ಟೆಸ್ಟ್ ಮಾಡಿದ್ದ ವೇಳೆ 30ಮಂದಿಗೆ ಕೊರೋನಾ ಇರುವುದು ಖಚಿತವಾಗಿದೆ. ಇದೀಗ ಸೋಂಕಿತ ಕೈದಿಗಳನ್ನು ಪ್ರತ್ಯೇಕ ಐಸೋಲೇಟೆಡ್ ಆಸ್ಪತ್ರೆಗೆ ಸಾಗಿಸಲಾಗಿದ್ದು ಅವರಿದ್ದ ಜೈಲಿನ ಭಾಗಗಳನ್ನು ಸ್ಯಾನಿಟ್ರೇಷನ್ ಮಾಡಲಾಗುತ್ತಿದೆ.

     ಇನ್ನು, ಆರೋಪಿಗಳ ಜೊತೆ ಸಂಪರ್ಕದಲ್ಲಿದ್ದ ಜೈಲು ಸಿಬ್ಬಂದಿಗೂ ಕೊವೀಡ್ ಟೆಸ್ಟ್ ಮಾಡಿಸಲು ಜೈಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಆರೋಪಿಗಳಿಗೆ ಊಟೋಪಚಾರ, ಉಸ್ತುವಾರಿ ಸೇರಿ ಹಲವು ಕೆಲಸ ಕಾರ್ಯಗಳಲ್ಲಿ ಜೈಲು ಸಿಬ್ಬಂದಿ ತೊಡಗಿದ್ದರು. ಅದರಿಂದ ಸೋಂಕು ಹರಡುವುದನ್ನು ತಡೆಯುವ ಸಲುವಾಗಿ ಸಿಬ್ಬಂದಿಗೆ ಕೊರೋನಾ ಟೆಸ್ಟ್ ಮಾಡಿಸಲು ಅಧಿಕಾರಿಗಳು ಮುಂದಾಗಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ