ತುಮಕೂರು:
ತುಮಕೂರಿನಲ್ಲಿ ಕೊರೋನಾ ಸೊಂಕಿನಿಂದ ಸಾವನ್ನಪ್ಪಿದ್ದ ವೃದ್ದನ ಮಗನಿಗೂ ಕೊರೋನಾ ಸೋಂಕು ಇರುವುದು ಧೃಡಪಟ್ಟಿದೆ.
ಕೊರೊನಾ ಸೋಂಕಿತ ವ್ಯಕ್ತಿ ಸಾವು: ಸಾರ್ವಜನಿಕರು ಮನೆಯಿಂದ ಹೊರ ಬರದಂತೆ ಡಿಸಿ ಮನವಿ
ಹೌದು, ಈ ಕುರಿತು ಮಾಹಿತಿ ನೀಡಿರುವ ತುಮಕೂರು ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್ ಅವರು ಕೊರೋನಾ ಸೊಂಕಿನಿಂದ ಸಾವನ್ನಪ್ಪಿದ್ದ ವೃದ್ದನ 13 ವರ್ಷದ ಮಗನಿಗೆ ಸೋಂಕು ದೃಢಪಟ್ಟಿದೆ. ಆತನ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದ್ದು, ಪರೀಕ್ಷೆಯಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ ಎಂದು ಎಂದು ಸ್ಪಷ್ಟಪಡಿಸಿದ್ದಾರೆ.
ಈತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಇಂದಿರಾ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರ ಜೊತೆಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಇತರರ ವರದಿಗಳು ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಎರಡು ದಿನಗಳ ಹಿಂದೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಹಳ್ಳಿಯೊಂದರ 65 ವರ್ಷದ ವೃದ್ದರೊಬ್ಬರು ಕೊರೊನಾ ವೈರಸ್ ಸೋಂಕು ಪೀಡಿತರಾಗಿ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು.
ಭಾರತದಲ್ಲಿ ಕೊರೊನಾ ವೈರಸ್ ಭೀತಿ ಹೆಚ್ಚಾಗುತ್ತಿದ್ದು ಜನತೆಯನ್ನು ತಲ್ಲಣಗೊಳಿಸಿದೆ., ಇಂದು ಒಂದೇ ದಿನ ಮೂವರು ವೈರಸ್ ಗೆ ಬಲಿಯಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
