ತುಮಕೂರು :
ತುಮಕೂರಿನಲ್ಲಿ ಇತ್ತೀಚೆಗೆ ಸಾವನ್ನಪ್ಪಿದ್ದ ವೃದ್ದನ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಕೊರೋನಾ ಸೋಂಕು ಇರುವುದು ಧೃಡಪಟ್ಟಿದೆ.
ಮೃತ ಪಿ-535 ರ ಪ್ರಾಥಮಿಕ ಸಂಪರ್ಕದಲ್ಲಿದ್ದ 65 ವರ್ಷದ ವೃದ್ಧೆ ಪಿ-553 ಗೂ ಕೋವಿಡ್-19 ಸೋಂಕು ದೃಢ- ಜಿಲ್ಲಾಧಿಕಾರಿಗಳಾದ ಡಾ.ಕೆ.ರಾಕೇಶ್ ಕುಮಾರ್ ರವರು ತಿಳಿಸಿದ್ದಾರೆ.
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಹಳ್ಳಿಯೊಂದರ 65 ವರ್ಷದ ವೃದ್ದರೊಬ್ಬರು ಕೊರೊನಾ ವೈರಸ್ ಸೋಂಕು ಪೀಡಿತರಾಗಿ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. ಮಹಾಮಾರಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ವ್ಯಾಪಿಸುತ್ತಿದ್ದು, ಇಂದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 5 ಕ್ಕೆ ಏರಿಕೆಯಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ