ಮಂಡ್ಯ :
ದಂಪತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ರಾಯಸಮುದ್ರ ಗ್ರಾಮದಲ್ಲಿ ನಡೆದಿದೆ.
ಗುಂಡಣ್ಣ (50) ಮತ್ತು ಲಲಿತಮ್ಮ (45) ಕೊಲೆಯಾದ ದಂಪತಿ. ಭಾನುವಾರದಿಂದ ಅವರ ಮನೆಗೆ ಬೀಗ ಹಾಕಲಾಗಿತ್ತು. ಅನುಮಾನ ಬಂದ ಸ್ಥಳೀಯರು ಶುಕ್ರವಾರ ಕಿಟಕಿಯಲ್ಲಿ ನೋಡಿದಾಗ ಇಬ್ಬರು ಶವವಾಗಿ ಬಿದ್ದಿರುವುದು ಕಂಡು ಬಂದಿದೆ. 6 ದಿನಗಳ ಹಿಂದೆ ದಂಪತಿಯನ್ನು ಅಪರಿಚಿತರು ಕೊಲೆ ಮಾಡಿ ಬೀಗ ಹಾಕಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ.
ಶವಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ದಂಪತಿಯನ್ನು ಕೊಲೆ ಮಾಡಿರುವ ಆರೋಪಿಗಳನ್ನು ಶೀಘ್ರ ಬಂಧಿಸಿ ಕ್ರಮ ಜರುಗಿಸಬೇಕು ಎಂದು ಗ್ರಾಮಾಸ್ಥರು ಒತ್ತಾಯಿಸಿದ್ದಾರೆ.
ಸ್ಥಳಕ್ಕೆ ಕೆಆರ್ ಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮುಂದಿನ ಕ್ರಮಕೈಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
