ಗುಬ್ಬಿ :
ಬೈಕ್ ನ್ನು ಓವರ್ ಟೇಕ್ ಮಾಡಲು ಹೋಗಿ ಕೆ.ಎಸ್.ಆರ್.ಟಿ.ಸಿ. ಬಸ್ ವೊಂದು ಬೈಕ್ ಗೆ ಗುದ್ದಿದ ಪರಿಣಾಮ ಇಬ್ಬರು ದಂಪತಿಗಳು ಭೀಕರವಾಗಿ ಸಾವನ್ನಪ್ಪಿರುವ ದುರ್ಘಟನೆ ಬೆಳಗ್ಗೆ 6.15 ರ ಸಮಯದಲ್ಲಿ ಗುಬ್ಬಿ- ತುಮಕೂರು ರಸ್ತೆಯ ಪಟ್ನಾಗೇಟ್ ಬಳಿ ನಡೆದಿದೆ.
ಮೃತರನ್ನು ಚಿಕ್ಕನಾಯಕನಹಳ್ಳಿ ನಿವಾಸಿಗಳಾದ ಈಶ್ವರಯ್ಯ(40), ಗೀತಾ(35) ಎಂದು ಗುರುತಿಸಲಾಗಿದೆ. ದಂಪತಿಗಳು ತಮ್ಮ ಮಗ ಕೀರ್ತಿ(10) ಜೊತೆ ಬೈಕ್ ನಲ್ಲಿ ಗುಬ್ಬಿ ಕಡೆಯಿಂದ ತುಮಕೂರು ಮಾರ್ಗವಾಗಿ ಬರುತ್ತಿದ್ದರು. ಈ ವೇಳೆ ಕೆ.ಎಸ್.ಆರ್.ಟಿ.ಸಿ. ಬಸ್ ಬೈಕ್ ನ್ನು ಓವರ್ ಟೇಕ್ ಮಾಡಲು ಹೋಗಿ ಎದುರುಗಡೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ.
ಪರಿಣಾಮ ಈಶ್ವರಯ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಪತ್ನಿ ಹಾಗು ಮಗನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪತ್ನಿ ಗೀತಾ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಮಗ ಕೀರ್ತಿ ಯ ಒಂದು ಕಾಲನ್ನು ಕಳೆದುಕೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಗುಬ್ಬಿ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ