ಮಂಡ್ಯ :
ಕೊರೊನಾಗೆ ಹೆದರಿ ಸೋಂಕಿತನೋರ್ವ ಮಂಡ್ಯ ಕೋವಿಡ್ ಆಸ್ಪತ್ರೆಯಲ್ಲೇ ಆತ್ಮಹತ್ಯೆಗೆ
ಶರಣಾಗಿದ್ದಾರೆ.
ಕೊರೊನಾದಿಂದ ಬಳಲುತ್ತಿದ್ದ 55 ವರ್ಷದ ವ್ಯಕ್ತಿ ತಮಗೆ ಕೊರೊನಾ ಇದೆ ಎಂದು ತಿಳಿದು ತೀವ್ರ ನೊಂದಿದ್ದು, ಬುಧವಾರ ರಾತ್ರಿ ಕೋವಿಡ್ ಆಸ್ಪತ್ರೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಪಿ.ಮಂಚೇಗೌಡ ಈ ಕುರಿತು ಪ್ರತಿಕ್ರಿಯಿಸಿ, ಮಳವಳ್ಳಿ ತಾಲ್ಲೂಕಿನ ಕಂದೇಗಾಲ ಗ್ರಾಮದ ವ್ಯಕ್ತಿ ಕಿಡ್ನಿ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಕೊರೊನಾ ಸೋಂಕು ಇರುವುದು ಖಾತರಿಯಾಗಿತ್ತು. ಅವರು ಬುಧವಾರ ಮಧ್ಯರಾತ್ರಿ ಶೌಚಾಲಯಕ್ಕೆ ತೆರಳಿ, ಕಿಟಕಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತರ ರೋಗಿಗಳು ಶೌಚಾಲಯ ಕ್ಕೆ ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ. ಸರ್ಕಾರದ ಕೋವಿಡ್ ಕಾರ್ಯಸೂಚಿಯಂತೆ ಗುರುವಾರ ಬೆಳಿಗ್ಗೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
