ರಾಮನಗರ :
ಕೋವಿಡ್ ಸೋಂಕಿತ ವ್ಯಕ್ತಿಯೊಬ್ಬರು ಆಸ್ಪತ್ರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚನ್ನಪಟ್ಟಣ ತಾಲೂಕಿನ ಹೊನ್ನಾಯಕನಹಳ್ಳಿಯಲ್ಲಿ ನಡೆದಿದೆ.
ಹೊಟ್ಟಿಗನಹೊಸಳ್ಳಿ ಗ್ರಾಮದ 37 ವರ್ಷದ ಕೋವಿಡ್ ಸೋಂಕಿತ ವ್ಯಕ್ತಿ ನೇಣೀಗೆ ಶರಣಾಗಿದ್ದಾನೆ. ಮೃತ ವ್ಯಕ್ತಿಗೆ ಕಳೆದ ನಾಲ್ಕು ದಿನಗಳ ಹಿಂದೆ ಕೋವಿಡ್ ಪಾಸಿಟಿವ್ ಬಂದಿತ್ತು. ಹಾಗಾಗಿ ತಾಲೂಕು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿತ್ತು. ಆದರೆ, ಸೋಂಕಿತ ವ್ಯಕ್ತಿಗೆ ಅನಾರೋಗ್ಯದಿಂದ ಬೇಸತ್ತು ನೇಣಿಗೆ ಶರಣಾಗಿದ್ದಾನೆ ಎಂದು ಹೇಳಲಾಗ್ತಿದೆ.
ಸ್ಥಳಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
