ಬೆಂಗಳೂರು :
ಕೊರೊನಾ ಸೋಂಕಿತ ವ್ಯಕ್ತಿ ಮೇಲ್ಸುತುವೆಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಚಂದ್ರಾ ಲೇಔಟ್ ಮೇಲ್ಸೇತುವೆಯಿಂದ 40 ವರ್ಷದ ಕೊರೊನಾ ಸೋಂಕಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಯಾರೆಂದು ಇನ್ನೂ ಗುರುತು ಪತ್ತೆಯಾಗಿಲ್ಲ, ಸದ್ಯ ಶವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ಅಂಡರ್ ಪಾಸ್ ಮೇಲೆ ಹತ್ತಿ ಕೊರೊನಾ ಸೋಂಕಿತ ವ್ಯಕ್ತಿ ಕೆಳಗೆ ಜಿಗಿದಿದ್ದಾನೆ. ಆಟೋ ಚಾಲಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಮೃತ ವ್ಯಕ್ತಿ ಹೋಮ್ ಕ್ವಾರಂಟೈನ್ ನಲ್ಲಿದ್ದು, ಖಿನ್ನತೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
