ರಮೇಶ್ ಜಾರಕಿಹೊಳಿಗೆ ಕೊರೊನಾ ಪಾಸಿಟಿವ್ ; ಐಸಿಯುಗೆ ಶಿಫ್ಟ್!

ಬೆಳಗಾವಿ : 

      ಮಾಜಿ ಸಚಿವ ರಮೇಶ್ ಜಾರಕಿಹೊಳಿ‌ಗೆ ಕೋವಿಡ್ ಸೋಂಕು ದೃಢಪಟ್ಟಿದ್ದು ಗೋಕಾಕದ ಸರ್ಕಾರಿ ಆಸ್ಪತ್ರೆಯ ಐಸಿಯುಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

      ಈ ಬಗ್ಗೆ ಗೋಕಾಕ ತಾಲ್ಲೂಕು ಆಸ್ಪತ್ರೆ ವೈದ್ಯ ರವೀಂದ್ರ ಸ್ಪಷ್ಟನೆ ನೀಡಿದ್ದು, ಮಾಜಿ ಸಚಿವರ ಕಾರು ಚಾಲಕ ಹಾಗೂ ಅಡುಗೆ ಭಟ್ಟ ಇಬ್ಬರಿಗೂ ಕೊರೊನಾ ಪಾಸಿಟಿವ್​ ಬಂದಿದೆ ಎಂದು ತಿಳಿಸಿದ್ದಾರೆ.

      ಹೊರ ರಾಜ್ಯದ ಪ್ರವಾಸದಲ್ಲಿದ್ದ ರಮೇಶ್ ಜಾರಕಿಹೊಳಿ‌ ಗುರುವಾರ ರಾತ್ರಿ ಗೋಕಾಕಿಗೆ ಬಂದಿದ್ದರು. ನಂತರ ಅವರಲ್ಲಿ ಕೋವಿಡ್ ಲಕ್ಷಣಗಳು ಕಂಡುಬಂದಿದ್ದವು. ಭಾನುವಾರ ರಾತ್ರಿ ಅವರು ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೋವಿಡ್ ಟೆಸ್ಟ್ ಮಾಡಲಾಗಿ ಸೋಂಕು ದೃಢಪಟ್ಟಿದೆ.

      ಮಹಾರಾಷ್ಟ್ರ ಹಾಗೂ ಬೆಂಗಳೂರಿಗೆ ಹೋಗಿ ಬಂದಿರುವ ಮಾಹಿತಿ ಲಭ್ಯವಾಗಿದ್ದು ಅಲ್ಲಿಂದ ಅವರಿಗೆ ಈ ಸೋಂಕು ತಗುಲಿರಬಹುದು ಎಂದು ವೈದ್ಯರು ಹೇಳಿದ್ದಾರೆ.

      ರಮೇಶ್ ಜಾರಕಿಹೊಳಿ‌ ಅವರಿಗೆ ರಕ್ತದೊತ್ತಡ ಹಾಗೂ ಮಧುಮೇಹ ಇರುವ ಕಾರಣ ಐಸಿಯುಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು. ಈಗ ಕೋವಿಡ್ ವಾರ್ಡ್​ನ ಐಸಿಯುನಲ್ಲಿರುವ ರಮೇಶ್ ಜಾರಕಿಹೊಳಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link