ಶಿವಮೊಗ್ಗ:
ಬಂಧಿಸಿದ ಆರೋಪಿಗೆ ಕೋವಿಡ್-19 ಸೋಂಕು ದೃಢವಾಗಿದ್ದು, ಆರೋಪಿಯನ್ನು ಬಂಧಿಸಿದ್ದ ಪೊಲೀಸರಿಗೆ ಆತಂಕ ಶುರುವಾಗಿದೆ.
ಶಿಕಾರಿಪುರ ಪಟ್ಟಣ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ ಕೇಸ್ ಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿ ಠಾಣೆಗೆ ಕರೆತರಲಾಗಿತ್ತು. ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಕಳ್ಳನನ್ನು ಕೋವಿಡ್ ತಪಾಸಣೆಗೆ ಒಳಪಡಿಸಿದ್ದರು. ಸದ್ಯ ಆತನ ಕೋವಿಡ್ ತಪಾಸಣಾ ವರದಿ ಬಂದಿದ್ದು, ಕೋವಿಡ್ ಸೋಂಕು ಇರುವುದು ಧೃಡಪಟ್ಟಿದೆ.
ಈ ಹಿನ್ನೆಲೆಯಲ್ಲಿ ಶಿಕಾರಿಪುರ ಪಟ್ಟಣ ಠಾಣೆಯಲ್ಲಿ ಕಳ್ಳನನ್ನು ವಿಚಾರಣೆ ನಡೆಸಿದ್ದ 4 ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿದ್ದು, ಪಿಎಸ್‌ಐ ಕೂಡಾ ತಾತ್ಕಾಲಿಕ ಕ್ವಾರಂಟೈನ್ ಗೆ ಒಳಪಟ್ಟಿದ್ದಾರೆ.
ಇನ್ನು ಠಾಣೆಯನ್ನು ಈಗಾಗಲೇ ಸ್ಯಾನಿಟೈಸ್ ಮಾಡಲಾಗಿದೆ. ಸೋಂಕಿತ ಕಳ್ಳನಿಗೆ ಕೋವಿಡ್ 19 ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ