ಬೆಂಗಳೂರು :

ಪತ್ನಿ ಮತ್ತು ಮಗನಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂಬ ಕಾರಣಕ್ಕೆ ಅಕ್ಕಪಕ್ಕದ ಮನೆಯವರು ಅವಮಾನಿಸಿದರು ಎಂಬ ಕಾರಣಕ್ಕೆ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಸರುಘಟ್ಟದಲ್ಲಿ ನಡೆದಿದೆ.
ದೊಡ್ಡಬಳ್ಳಾಪುರದ ನಾಗರಾಜು(56) ಆತ್ಮಹತ್ಯೆ ಮಾಡಡಿಕೊಂಡ ವ್ಯಕ್ತಿ. ಮೃತ ನಾಗರಾಜು ಪುತ್ರನಿಗೆ ಮೊದಲು ಸೋಂಕು ತಗುಲಿತ್ತು. ನಂತರ ಪತ್ನಿ ಕೊರೊನಾ ಪರೀಕ್ಷೆ ಮಾಡಿಸಿದಾಗ, ಆಕೆಗೂ ಸೋಂಕು ಇರುವುದು ಪತ್ತೆಯಾಗಿದ್ದರಿಂದ ಅವರು ವಾಸವಿದ್ದ ಪ್ರದೇಶವನ್ನು ಸೀಲ್‍ಡೌನ್ ಮಾಡಲಾಗಿತ್ತು. ಸೀಲ್‍ಡೌನ್ ವೇಳೆ ಅಕ್ಕಪಕ್ಕದ ಮನೆಯವರು ಮೃತ ನಾಗರಾಜ್ ಕುಟುಂಬಸ್ಥರನ್ನು ಅವಮಾನಿಸಿದ್ದರು. ನಿಮ್ಮಿಂದ ನಮಗೆಲ್ಲ ಸಮಸ್ಯೆ ಆಗುತ್ತಿದೆ. ಎಲ್ಲಾದರೂ ದೂರ ಹೋಗಿ ಎಂದು ಜಗಳವಾಡಿದ್ದರು ಎನ್ನಲಾಗಿದೆ.

ನೆರೆಹೊರೆಯವರ ವರ್ತನೆಯಿಂದ ನೊಂದು ಹೆಸರುಘಟ್ಟದ ಕೆರೆಯಲ್ಲಿ ಮರವೊಂದಕ್ಕೆ ನಾಗರಾಜು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಮೃತದೇಹವನ್ನು ಸಪ್ತಗಿರಿ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ಗಾಗಿ ರವಾನಿಸಲಾಗಿದ್ದು, ವರದಿ ಬಂದ ನಂತ್ರ ಅಂತ್ಯಸಂಸ್ಕಾರ ನಡೆಸಲಾಗುತ್ತದೆ ಎನ್ನಲಾಗಿದೆ.
ಇನ್ನು ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








