ಬೆಂಗಳೂರು:
ಸಿ.ಪಿ ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ನೀಡುವುದು ಖಚಿತ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ನೀಡುವುದು ಖಚಿತ. ಸಿ.ಪಿ.ಯೋಗೇಶ್ವರ್ ಚುನಾವಣೆಯಲ್ಲಿ ಸೋತರೂ ಕೂಡ ಅವರಿಗೆ ಮಂತ್ರಿ ಸ್ಥಾನ ನೀಡಲು ಬಿಜೆಪಿ ಹಲವು ನಾಯಕರಲ್ಲಿ ಅಸಮಾಧಾನ ವ್ಯಕ್ತವಾಗಿತ್ತು. ವಿರೋಧದ ನಡುವೆಯೂ ಸಿಎಂ ಯಡಿಯೂರಪ್ಪ ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡಲು ಮುಂದಾಗಿರುವುದು ಅಚ್ಚರಿಗೆ ಕಾರಣವಾಗಿದೆ.
ಆ ಮೂಲಕ ರಾಜ್ಯದಲ್ಲಿ ಸಚಿವ ಸಂಪುಟ ಪುನರ್ ರಚನೆ ಚುರುಕುಗೊಂಡಿರುವ ಬೆನ್ನಲ್ಲೇ, ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೀಶ್ವರ್ ಅವರು ಸಚಿವ ಸಂಪುಟ ಸೇರುವುದು ಖಚಿತವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ