ಕೇರಳದಿಂದ ಕರ್ನಾಟಕಕ್ಕೆ ಬರುತ್ತಿದ್ದ ಆಂಬುಲೆನ್ಸ್ ಗೆ ತಡೆ : ಕೊರೋನಾ ಸೋಂಕಿತ ಸಾವು!!

ಕಾಸರಗೋಡು :

     ಕಾಸರಗೋಡಿನ ಕೊರೋನಾ ಸೋಂಕಿತ ರೋಗಿಯನ್ನು ಮಂಗಳೂರಿಗೆ ಕರೆತರಲು ಗಡಿ ಪೊಲೀಸರು ಬಿಡದ ಹಿನ್ನೆಲೆಯಲ್ಲಿ ಆಂಬುಲೆನ್ಸ್ ನಲ್ಲೆ ರೋಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

      ಗಡಿನಾಡಾದ ಕಾಸರಗೊಂಡಿನಲ್ಲಿ ಕೊರೋನಾ ಪೀಡಿತ ವ್ಯಕ್ತಿಯನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ತಲ್ಪಾಡಿಯಲ್ಲಿ ಗಡಿ ದಾಟಲು ಕರ್ನಾಟಕ ಪೊಲೀಸರು ಅನುಮತಿ ನಿರಾಕರಿಸಿದ ಕಾರಣ 49 ವರ್ಷದ ರೋಗಿ ಆಂಬ್ಯಲೆನ್ಸ್‌ನಲ್ಲೇ ಸಾವನ್ನಪ್ಪಿದ್ದಾರೆ.

      ಮಂಗಳೂರಿನಲ್ಲಿ ಅತ್ಯುತ್ತಮ ಹೈಟೆಕ್ ಆಸ್ಪತ್ರೆಗಳು ಹಾಗೂ ಉತ್ತಮ ಚಿಕಿತ್ಸೆ ಸಿಗುವ ಹಿನ್ನೆಲೆಯಲ್ಲಿ ಕಾಸರಗೋಡಿನ ಜನ ವೈದ್ಯಕೀಯ ಚಿಕಿತ್ಸೆಗೆ ಇಲ್ಲಿಗೆ ಆಗಮಿಸುತ್ತಿದ್ದಾರೆ. ಆದರೆ, ಕೊರೋನಾ ವೈರಸ್‌ ಭೀತಿಯಿಂದಾಗಿ ಅಂತಾರಾಜ್ಯ ಗಡಿಯನ್ನು ಮುಚ್ಚಲಾಗಿದೆ. ಹೀಗಾಗಿ ಗಡಿ ದಾಟಿ ಕರ್ನಾಟಕದ ಒಳಗೆ ಬರಲು ಯಾವುದೇ ವಾಹನಗಳಿಗೆ ಅವಕಾಶ ನೀಡಲಾಗುತ್ತಿಲ್ಲ. ಪರಿಣಾಮ ಕಳೆದ ಒಂದು ವಾರದಲ್ಲಿ 4 ಜನ ರೋಗಿಗಳು ಕಾಸರಗೋಡಿನಿಂದ ಗಡಿ ದಾಟಿ ಚಿಕಿತ್ಸೆ ಪಡೆಯಲಾಗದೆ ಮೃತಪಟ್ಟಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ