ವೆಂಟಿಲೇಟರ್ ಚಿಕಿತ್ಸೆ : ಬುಲೆಟ್ ಪ್ರಕಾಶ್ ಆರೋಗ್ಯ ಸ್ಥಿತಿ ಗಂಭೀರ!!

ಬೆಂಗಳೂರು :

      ಸ್ಯಾಂಡಲ್ ವುಡ್ ಹಾಸ್ಯ ನಟ ಬುಲೇಟ್ ಪ್ರಕಾಶ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಸದ್ಯ ಅವರಿಗೆ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

      ಕಳೆದೊಂದು ತಿಂಗಳಿನಿಂದ ಬುಲೆಟ್ ಪ್ರಕಾಶ್ ಆರೋಗ್ಯದಲ್ಲಿ ಏರುಪೇರಾಗಿತ್ತು. ಇದೀಗ ಆರೋಗ್ಯ ಸ್ಥಿತಿ ಗಂಭೀರವಾದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೆಂಟಿಲೇಟರ್‌ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಕಿಡ್ನಿ ಹಾಗೂ ಲಿವರ್ ಸಮಸ್ಯೆಯಿಂದಾಗಿ ಬುಲೆಟ್ ಪ್ರಕಾಶ್ ಶನಿವಾರ ಕನ್ನಿಂಗ್‍ಹ್ಯಾಮ್ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದರು. 

ಮನೆಯಲ್ಲಿ ರೇಷನ್ ಇಲ್ಲದೆ ಮುದ್ದೆ ...

       ಚಿಕಿತ್ಸೆ ನೀಡುತ್ತಿರುವ ಡಾಕ್ಟರ್‌ ತೇಜಸ್ವಿ ಮಾತನಾಡಿ, ಕೆಲವು ದಿನಗಳ ಹಿಂದೆ ಗ್ಯಾಸ್ಟ್ರಿಕ್‌ ತೊಂದರೆಯಿಂದ ಬೆಂಗಳೂರಿನ ಪೋರ್ಟೀಸ್‌ ಆಸ್ಪತ್ರೆಯಲ್ಲಿ ಆಡ್ಮಿಟ್‌ ಆಗಿದ್ದ ಬುಲೆಟ್ ಪ್ರಕಾಶ್‌ ಆರೋಗ್ಯದಲ್ಲಿ ತುಂಬಾನೇ ಏರು-ಪೇರು ಕಾಣಿಸಿಕೊಳ್ಳುತ್ತಿದೆ. ಶೀಘ್ರದಲ್ಲೇ ಆರೋಗ್ಯ ಸ್ಥಿತಿಗತಿ ಬಗ್ಗೆ ಮಾಹಿತಿ ನೀಡುತ್ತೇವೆ ಎಂದು ಹೇಳಿದ್ದಾರೆ.

     ಕೆಲವು ವರ್ಷಗಳ ಹಿಂದೆ ದೇಹ ತೂಕ ಕಡಿಮೆ ಮಾಡಿಕೊಳ್ಳಲು ಯತ್ನಿಸಿದಾಗ ಆರೋಗ್ಯ ಹೆಚ್ಚು ಕಡಿಮೆಯಗಿತ್ತು. ಅದರ ಪರಿಣಾಮವನ್ನು ಪ್ರಕಾಶ್ ಇಂದಿಗೂ ಅನುಭವಿಸುತ್ತಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 
 
 
 

Recent Articles

spot_img

Related Stories

Share via
Copy link
Powered by Social Snap