ಬೆಂಗಳೂರು :
ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಆದಾಯ ತೆರಿಗೆ ಇಲಾಖೆಯ ಕಚೇರಿಯಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಕರೆ ಬಂದಿದೆ.
ಬೆದರಿಕೆ ಕರೆ ಬಂದ ಹಿನ್ನಲೆಯ್ಲಲಿ, ಇದೀಗ ಐಟಿ ಇಲಾಖೆಯ ಕಚೇರಿಗೆ ಬಾಂಬ್ ನಿಷ್ಕ್ರೀಯ ದಳ, ಶ್ವಾನದಳದ ಪೊಲೀಸ್ ಅಧಿಕಾರಿಗಳು ಆಗಮಿಸಿ, ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.
ಕಸ್ಟಮ್ಸ್ ಡೆಪ್ಯುಟಿ ಕಮಿಷನರ್ಗೆ ತಡರಾತ್ರಿ 10.45ಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿತ್ತು. ತಡರಾತ್ರಿಯೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ 300 ಪೊಲೀಸರು ಕಸ್ಟಮ್ಸ್ ಮತ್ತು ಐಟಿ ಕಚೇರಿಗೆ ದೌಡಾಯಿಸಿದ್ದು, ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ರಾತ್ರಿ ಇಡೀ ತಪಾಸಣೆ ನಡೆಸಿದ್ದು, ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/10/it-bangalore.gif)