ಮಂಗಳೂರು:
ವಾಯುಭಾರ ಕುಸಿತ ಹಿನ್ನೆಲೆ ಉಳ್ಳಾಲದಲ್ಲಿ ಸಮುದ್ರದ ಅಲೆಗಳು ದಡಕ್ಕೆ ಬಿರುಸಿನಿಂದ ಅಪ್ಪಳಿಸುತ್ತಿದ್ದು, ಕೈಕೋ, ಕಿಲಿರಿಯಾನಗರ, ಮೊಗವೀರಪಟ್ನ ಸಮುದ್ರ ತೀರದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.
ಅತ್ತ ಉತ್ತರ ಕರ್ನಾಟಕದ ಜನ ಮಳೆ, ಪ್ರವಾಹದಿಂದ ತತ್ತರಿಸಿರುವಾಗಲೇ ರಾಜ್ಯದ ಕರಾವಳಿ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಎಚ್ಚರಿಕೆ ನೀಡಲಾಗಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ‘ಕ್ಯಾರ್’ ಚಂಡ ಮಾರುತ ಉದ್ಭವಿಸಿದೆ. ಹೀಗಾಗಿ ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಮಹಾರಾಷ್ಟ್ರದ ರತ್ನಗಿರಿಯಿಂದ 360 ಕಿಮೀ ದೂರದ ಅರಬ್ಬೀ ಸಮುದ್ರದ ಮಧ್ಯೆ ತೀವ್ರ ವಾಯುಭಾರ ಕುಸಿತ ಕಾಣಿಸಿಕೊಂಡಿದ್ದು, ಮಾರುತಗಳು ಸುಂಟರಗಾಳಿಯಾಗಿ ಮಾರ್ಪಡುವ ಬಗ್ಗೆ ಮುನ್ಸೂಚನೆ ನೀಡಲಾಗಿದೆ.
ಈ ಮಾರುತಗಳು ದಕ್ಷಿಣದಿಂದ ಈಶಾನ್ಯ ಭಾಗ ಎಂದರೆ, ಕರ್ನಾಟಕದ ಕರಾವಳಿ ಮತ್ತು ಗೋವಾ ಭಾಗದತ್ತ ಬರುತ್ತಿದ್ದು, ತೀವ್ರ ಗಾಳಿ ಮತ್ತು ಮಳೆಯೊಂದಿಗೆ ಕರಾವಳಿಗೆ ಅಪ್ಪಳಿಸಲಿದೆ. ಮುಂದಿನ 24 ಗಂಟೆಗಳಲ್ಲಿ ಯಾವುದೇ ಕ್ಷಣದಲ್ಲಿ ಈ ಮಾರುತಗಳ ಹೊಡೆತ ಕರಾವಳಿಗೆ ತಟ್ಟಲಿದೆ ಎನ್ನುವ ಎಚ್ಚರಿಕೆ ನೀಡಲಾಗಿದೆ.
ಪೂರ್ವ ಮಧ್ಯ ಅರಬ್ಬಿ ಸಮುದ್ರದ ಮೇಲಿರುವ ಗುರುತಿಸಲಾದ ಕಡಿಮೆ ಒತ್ತಡದ ಪ್ರದೇಶವು ಯಾವುದೇ ಸಮಯದಲ್ಲಿ ಶೀಘ್ರದಲ್ಲೇ ಖಿನ್ನತೆಗೆ ತೀವ್ರಗೊಳ್ಳುತ್ತದೆ. ನಾಳೆಯ ಹೊತ್ತಿಗೆ, ಈ ವ್ಯವಸ್ಥೆಯು ವಾಯುವ್ಯ ದಿಕ್ಕಿನಲ್ಲಿ ಚಲಿಸಲು ಪ್ರಾರಂಭಿಸುತ್ತದೆ ಮತ್ತು ಸೈಕ್ಲೋನ್‌ಗೆ ಮತ್ತಷ್ಟು ತೀವ್ರಗೊಳ್ಳುತ್ತದೆ. ಈ ಚಂಡಮಾರುತವನ್ನು ‘ಕ್ಯಾರ್’ ಎಂದು ಕರೆಯಲಾಗುತ್ತದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ