ಚಿತ್ರದುರ್ಗ:
ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯಲಿದ್ದ ಮೂವರು ಮೃತಪಟ್ಟ ದಾರುಣ ಘಟನೆ ಇಂದು ಬೆಳಗ್ಗೆ ಇಲ್ಲಿನ ಗಾರೆಹಟ್ಟಿ ಬಡಾವಣೆಯ ಮನೆಯೊಂದರಲ್ಲಿ ನಡೆದಿದೆ.
ಮೃತರನ್ನು ಅರುಣ್ (40), ಪತ್ನಿ ಲತಾ (35), ಹಾಗೂ 7ನೇ ತರಗತಿ ವಿದ್ಯಾರ್ಥಿನಿ ಪುತ್ರಿ ಅಮೃತಾ(13) ಎಂದು ಗುರುತಿಸಲಾಗಿದೆ.
ಮೃತ ಅರುಣ್ ಖಾಸಗಿ ಬಸ್ ಏಜೆಂಟ್ ಆಗಿದ್ದರು. ಪತ್ನಿ ಲತಾ ಖಾಸಗಿ ಆಸ್ಪತ್ರೆಯಲ್ಲಿ ಶುಶ್ರೂಷಕಿಯಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಘಟನೆ ಬಗ್ಗೆ ತಿಳಿದು ಅಕ್ಕಪಕ್ಕದ ಮನೆಯವರು ಬೆಚ್ಚಿಬಿದ್ದಿದ್ದಾರೆ.
ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡು ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ