ದಾವಣಗೆರೆ:
ಮದುವೆ ಸಂಭ್ರಮದಲ್ಲಿದ್ದ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಪರಿಣಾಮ ಸಾಮಾಗ್ರಿಗಳು ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ರಸ್ತೆಮಾಚಿಕೆರೆ ಗ್ರಾಮದಲ್ಲಿ ನಡೆದಿದೆ.
ಇನ್ನೆರಡು ದಿನಗಳಲ್ಲಿ ಷಡಕ್ಷರಪ್ಪ ಅವರ ಮನೆಯಲ್ಲಿ ಮದುವೆ ಸಮಾರಂಭವಿತ್ತು. ಆದ್ದರಿಂದ ಮನೆಯಲ್ಲಿ ಮದುವೆ ಬೇಕಾದ ಸಾಮಾಗ್ರಿಗಳನ್ನು ತಂದಿಡಲಾಗಿತ್ತು. ದುರದೃಷ್ಟವೆನ್ನುವಂತೆ ಆಕಸ್ಮಿಕವಾಗಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮದುವೆ ಸಾಮಾಗ್ರಿಗಳೆಲ್ಲ ಬೆಂಕಿಗಾಹುತಿಯಾಗಿದೆ.
ಘಟನೆಯಿಂದ ಯಾವುದೇ ಪ್ರಾಣ ಹಾನಿಯಾಗದಿದ್ದರೂ ಮದುವೆ ಸಂಭ್ರಮದಲ್ಲಿದ್ದ ಮನೆಮಂದಿ ಮುಂದೇನು ಮಾಡುವುದು ಎನ್ನುವ ಚಿಂತೆಯಲ್ಲಿದ್ದಾರೆ.
ಸ್ಥಳಕ್ಕೆ ಅಗ್ನಿ ಶಾಮಕದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಿಯಂತ್ರಣ ಮಾಡಿದ್ದಾರೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
