ಬೆಂಗಳೂರು :

ಇಂದಿನಿಂದ ರಾಜ್ಯದಲ್ಲಿ ಕಾರ್ಮಿಕರ ಕೆಲಸದ ಅವಧಿಯನ್ನು 8 ಗಂಟೆಗೆ ಸೀಮಿತಗೊಳಿಸಿದೆ ಎಂದು ಕಾರ್ಮಿಕ ಮತ್ತು ಸಕ್ಕರೆ ಖಾತೆ ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದ್ದಾರೆ.
ಕೋವಿಡ್ ಸೋಂಕಿನಿಂದ ದೇಶದೆಲ್ಲೆಡೆ ಲಾಕ್ ಡೌನ್ ಘೋಷಣೆ ಮಾಡಿದ ಸಂದರ್ಭ ಕೈಗಾರಿಕೆಗಳು, ಕಂಪೆನಿಗಳು ಕೆಲವು ತಿಂಗಳು ಬೀಗ ಹಾಕಿದ್ದವು. ಇದರಿಂದ ಸಾಕಷ್ಟು ನಷ್ಟವನ್ನು ಅನುಭವಿಸಿದವು. ಆದರೆ ಲಾಕ್ ಡೌನ್ ಸಡಿಲಿಕೆ ಆದ ಬಳಿಕ ಕೈಗಾರಿಕೆಗಳಲ್ಲಿ, ಕಂಪೆನಿಗಳಲ್ಲಿ ಕಾರ್ಮಿಕರ ಕೆಲಸದ ಅವಧಿಯನ್ನು ಕಾರ್ಮಿಕ ಇಲಾಖೆಯು ರಾಜ್ಯದಲ್ಲಿದ್ದ ವಾರಕ್ಕೆ 40 ಗಂಟೆ ಇದ್ದ ದುಡಿಯುವ ಸಮಯವನ್ನು 60 ಗಂಟೆಗೆ ಏರಿಸಿತ್ತು, ಆದರೆ ಇತರೆ ರಾಜ್ಯಗಳಲ್ಲಿ 8 ಗಂಟೆ ಇದ್ದ ಕೆಲಸದ ಅವಧಿಯನ್ನು 10 ಗಂಟೆಗೆ ಹೆಚ್ಚಿಸಿತ್ತು.
ಕಾರ್ವಿುಕರ ಪ್ರತಿ ದಿನದ ಕೆಲಸದ ಅವಧಿಯನ್ನು 10 ತಾಸುಗಳವರೆಗೆ ಹೆಚ್ಚಿಸಿ ಸರ್ಕಾರ ಹೊರಡಿಸಿರುವ ಅಧಿಸೂಚನೆ ರದ್ದುಪಡಿಸಲು ಕೋರಿ ಮಾರುತಿ ಎಂಬುವರು ಸಲ್ಲಿಸಿರುವ ಪಿಐಎಲ್ ಅನ್ನು ಸಿಜೆ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ಗುರುವಾರ ವಿಚಾರಣೆ ನಡೆಸಿತು.
ಕೋವಿಡ್-19 ಪರಿಸ್ಥಿತಿಯನ್ನು ‘ಸಾರ್ವಜನಿಕ ತುರ್ತು ಪರಿಸ್ಥಿತಿ’ ಎಂದು ಪರಿಗಣಿಸಿ ಕೈಗಾರಿಕೆಗಳ ಕಾಯ್ದೆಯ ಸೆಕ್ಷನ್ 5ರ ಅನ್ವಯ ಕಾರ್ವಿುಕರ ಕೆಲಸದ ಅವಧಿ ಹೆಚ್ಚಿಸಿರುವ ಸರ್ಕಾರದ ಕ್ರಮ ಒಪ್ಪಲಾಗದು ಎಂದು ಹೈಕೋರ್ಟ್ ಹೇಳಿದೆ. ಸರ್ಕಾರ ಹೊಸದಾಗಿ ನಿರ್ಧಾರ ಕೈಗೊಳ್ಳದಿದ್ದರೆ ಕೆಲಸದ ಅವಧಿ ಹೆಚ್ಚಿಸಿರುವ ಅಧಿಸೂಚನೆಗೆ ತಡೆಯಾಜ್ಞೆ ನೀಡುವುದಾಗಿ ತಿಳಿಸಿದೆ.
ಈ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಿ ಕಾರ್ಮಿಕರ ಕೆಲಸದ ಅವಧಿಯನ್ನು 8 ಗಂಟೆಗೆ ಸೀಮಿತಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








