ಮಂಗಳೂರು:
ಇಂದಿನಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಧಾರ್ಮಿಕ ಸಂಸ್ಥೆಗಳ ಜಾತ್ರೆಗಳು, ಉತ್ಸವಗಳು, ಸಮಾರಂಭಗಳನ್ನು ರದ್ದುಪಡಿಸಲಾಗಿದೆ ಹಾಗೂ ಬೀಚ್ ಗಳಿಗೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಅವರು ಈ ಬಗ್ಗೆ ಆದೇಶ ಹೊರಡಿಸಿದ್ದು, ದೇವಾಲಯಗಳಲ್ಲಿ ವಿಶೇಷ ಪೂಜೆ, ಹೋಮ-ಹವನ ಮಾಡಲು ಅವಕಾಶವಿರುವುದಿಲ್ಲ. ದರ್ಶನಕ್ಕೆ ಮಾತ್ರ ವ್ಯವಸ್ಥೆ ಮಾಡಿಕೊಡಲಾಗುವುದು. ದೇವಸ್ಥಾನದ ಉತ್ಸವಗಳಿದ್ದರೆ ಸಿಬ್ಬಂದಿಗೆ ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ ಎಂದು ಜಿಲ್ಲಾಧಿಕಾರಿಯವರು ತನ್ನ ಆದೇಶದಲ್ಲಿ ತಿಳಿಸಿದ್ದಾರೆ.
ದೇವಸ್ಥಾನ , ಚರ್ಚ್, ಮಸೀದಿಗಳಲ್ಲಿ ಗುಂಪು ಗುಂಪಾಗಿ ಪ್ರಾರ್ಥನೆ, ಸಭೆ ಮಾಡಲು ಮುಂದಿನ ಆದೇಶದ ತನಕ ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ವರು ಆದೇಶ ಹೊರಡಿಸಿದ್ದಾರೆ. ಯಾವುದೇ ರೀತಿಯ ಬೇಸಿಗೆ ಶಿಬಿರ, ವಿಚಾರ ಸಂಕಿರಣ, ಸಭೆ, ಸಮಾರಂಭಗಳನ್ನು ಕೂಡ ಮುಂದಿನ ಆದೇಶದ ತನಕ ರದ್ಧು ಮಾಡಿರುವುದಾಗಿ ದ.ಕ .ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ತನ್ನ ಆದೇಶದಲ್ಲಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ