ಬೆಳಗಾವಿ:
ದಲಿತ ಸಂಘಟನೆಯ ಅಧ್ಯಕ್ಷನೋರ್ವನನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೈದಿರುವ ಘಟನೆ ಇಲ್ಲಿನ ಗೋಕಾಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಗೋಕಾಕ ಪಟ್ಟಣದ ಆದಿ ಜಾಂಬವ ನಗರದ ನಿವಾಸಿ ಸಿದ್ದು ಅರ್ಜುನ ಕಣಮಡ್ಡಿ (27) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ.
ಬುಧವಾರ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಹಲ್ಲೆಗೊಳಗಾದ ಯುವಕನನ್ನು ಗೋಕಾಕ ಆಸ್ಪತ್ರೆಯಲ್ಲಿ ದಾಖಲಿಸಿ ಬಳಿಕ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ತಂದು ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ.
ಘಟನೆಗೆ ಹಳೇ ದ್ವೇಷವೇ ಕಾರಣ ಇರಬಹುದು ಎಂದು ಪೊಲೀಸರು ಶಂಕಿಸಲಾಗಿದೆ. ಘಟನೆ ಸಂಬಂಧ ಗೋಕಾಕ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ