ಬೆಂಗಳೂರು :
ಮಠ ಮಾನ್ಯಗಳಿಗೆ ದಾಸೋಹ ಯೋಜನೆಯ ವೆಲ್ ಫೇರ್ ಸ್ಕೀಮ್ ನ ಅಡಿಯಲ್ಲಿ ಅಕ್ಕಿ ಹಾಗೂ ಗೋಧಿ ನೀಡುವ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ.
ಸಿದ್ದಗಂಗಾ ಮಠ, ಆದಿಚುಂಚನಗಿರಿ ಮಠ ಹಾಗೂ ಸುತ್ತೂರು ಮಠ ಸೇರಿದಂತೆ ಪ್ರಮುಖ ಮಠಗಳಿಗೆ ನೀಡುತ್ತಿದ್ದ ಅಕ್ಕಿ ಹಾಗೂ ಗೋದಿಯನ್ನು ಕಳೆದ ಕೆಲವು ತಿಂಗಳ ಹಿಂದೆ ಸರ್ಕಾರ ಏಕಾಏಕಿ ಸ್ಥಗಿತಗೊಳಿಸಿತ್ತು. ಬಳಿಕ ಮೊದಲಿನಂತೆ ಮಠ ಹಾಗೂ ಸಂಘ, ಸಂಸ್ಥೆಗಳಿಗೆ ಪುನಃ ಅಕ್ಕಿ ಹಾಗೂ ಗೋಧಿ ಕೊಡುವುದಾಗಿ ಸಿಎಂ ಬಿಎಸ್ ವೈ ಭರವಸೆ ನೀಡಿದ್ದರು.
ಅದರಂತೆ ಫೆಬ್ರವರಿ ಮೊದಲ ವಾರದಿಂದ 91 ಅನುದಾನಿತ, 16 ಅನುದಾನೇತರ, 222 ಖಾಸಗಿ ಮತ್ತು 22 ಸ್ವಯಂ ಸೇವಾ ಸಂಸ್ಥೆಗಳು ಸೇರಿದಂತೆ ಒಟ್ಟು 351 ಸರ್ಕಾರೇತರ ಕಲ್ಯಾಣ ಸಂಸ್ಥೆಗಳಿಗೆ ಅಕ್ಕಿ ಹಾಗೂ ಗೋಧಿ ನೀಡಿಕೆ ಮೊದಲಿನಂತೆ ಯಥಾವತ್ತಾಗಿ ಮುಂದುವರಿಸಲು ಅಧಿಕೃತ ಆದೇಶ ಹೊರಡಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ