ದಾವಣಗೆರೆ :
ಇಬ್ಬರು ಮಕ್ಕಳೊಂದಿಗೆ ಕಾಲುವೆಗೆ ಹಾರಿ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆ ಜಿಲ್ಲೆ ಹೆಚ್. ಕಲ್ಪನಹಳ್ಳಿ ಸಮೀಪ ನಡೆದಿದೆ.
32 ವರ್ಷದ ಶಿಕ್ಷಕಿ ಶ್ರೀದೇವಿ, 12 ವರ್ಷದ ಪುತ್ರ ನೂತನ್ ಹಾಗೂ 9 ವರ್ಷದ ಪುತ್ರಿ ಹಂಸಿಕಾ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ದಾವಣಗೆರೆ ಜಯನಗರದಲ್ಲಿ ವಾಸವಾಗಿದ್ದ ಶ್ರೀದೇವಿ ದಾವಣಗೆರೆ ಖಾಸಗಿ ಪ್ರೌಡಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಅವರ ಪತಿ ಪಿಯುಸಿ ಕಾಲೇಜ್ ಪ್ರಾಂಶುಪಾಲರಾಗಿದ್ದಾರೆ.
ಶ್ರೀದೇವಿ ಹಾಗೂ ಅವರ ಪತಿ ನಡುವೆ ಮನೆ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಜಗಳವಾಗಿತ್ತು. ಇದೇ ಜಗಳದಿಂದ ವೈಮನಸ್ಸು ಉಂಟಾಗಿ ತನ್ನ ಇಬ್ಬರು ಮಕ್ಕಳನ್ನು ಸ್ಕೂಟಿಯಲ್ಲಿ ಕಾಲುವೆ ಬಳಿ ಕರೆತಂದ ಶ್ರೀದೇವಿ ಅವರು ಮಕ್ಕಳನ್ನು ತಮ್ಮ ಸೊಂಟಕ್ಕೆ ಕಟ್ಟಿಕೊಂಡು ಕಾಲುವೆಗೆ ಹಾರಿದ್ದಾರೆ.
ಮೂವರ ಮೃತದೇಹಗಳನ್ನು ಹೊರ ತೆಗೆಯಲಾಗಿದ್ದು, ಶವಾಗಾರಕ್ಕೆ ಸ್ಥಳಾಂತರ ಮಾಡಲಾಗಿದೆ. ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ