ದಾವಣಗೆರೆ :

ದ್ವಿಚಕ್ರ ವಾಹನವೊಂದಕ್ಕೆ ಅಪರಿಚಿತ ವಾಹನವೊಂದು ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆ ಚನ್ನಗಿರಿ ತಾಲೂಕಿನ ರೊಪ್ಪದಹಟ್ಟಿ ಕ್ರಾಸ್ ಬಳಿ ನಡೆದಿದೆ.
ಹಿದಾಯತ್ ವುಲ್ಲಾ(19), ರಂಗಪ್ಪ(44), ಮೊಹಮ್ಮದ್ ಸೈಫುಲ್ಲಾ(47) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರದ ವಿಠಲಪುರ ಗ್ರಾಮದಲ್ಲಿ ಗಾರೆ ಕೆಲಸ ಮುಗಿಸಿ ಒಂದೇ ಬೈಕ್ ನಲ್ಲಿ ಊರಿಗೆ ಮರಳುವ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ.
ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.
ಚನ್ನಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








