ಬೆಂಗಳೂರು:
ಮುಂದಿನ 4 ವರ್ಷಗಳ ಕಾಲ ಕುಮಾರಸ್ವಾಮಿಯವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಉಪಮುಖ್ಯಮಂತ್ರಿ ಡಾll ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಇಂದು ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಸಚಿವರ ಸಭೆಯ ನಂತರ ಮಾತನಾಡಿದ ಪರಮೇಶ್ವರ್,ಸರ್ಕಾರದ ಬಗ್ಗೆ ಊಹಾಪೋಹಗಳು ಕೇಳಿ ಬರುತ್ತಿವೆ. ಯಾವುದೇ ಕಾರಣಕ್ಕೂ ಸರ್ಕಾರ ಬೀಳುವುದಿಲ್ಲ. ಸಿಎಂ ಬೆಂಬಲಕ್ಕೆ ನಮ್ಮ ಎಲ್ಲಾ ಸಚಿವರು ನಿಂತಿದ್ದಾರೆ. ಮುಂದಿನ ನಾಲ್ಕು ವರ್ಷ ಎಚ್.ಡಿ.ಕುಮಾರಸ್ವಾಮಿ ಅವರೆ ಮುಖ್ಯಮಂತ್ರಿಯಾಗಿರುತ್ತಾರೆ. ಎಂದು ತಿಳಿಸಿದ್ದಾರೆ.
‘ರಾಜ್ಯದಲ್ಲಿ ಜೆಡಿಎಸ್–ಕಾಂಗ್ರೆಸ್ ನೇತೃತ್ವದ ಮೈತ್ರಿ ಸರ್ಕಾರ ಭದ್ರವಾಗಿದೆ. ‘ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೆ ಪತನವಾಗುವುದಿಲ್ಲ. ಆದರೆ ವಿಪಕ್ಷಗಳು ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿವೆ. ಆಪರೇಷನ್ ಕಮಲ ಯಶಸ್ವಿಯಾಗುವುದಿಲ್ಲ’ ಮುಂದಿನ ನಾಲ್ಕು ವರ್ಷ ಎಚ್.ಡಿ.ಕುಮಾರಸ್ವಾಮಿ ಅವರೆ ಮುಖ್ಯಮಂತ್ರಿಯಾಗಿರುತ್ತಾರೆ. ಎಂದು ತಿಳಿಸಿದ್ದಾರೆ.
ಜನರು ಕೇಂದ್ರದಲ್ಲಿ ಯಾವ ಸರ್ಕಾರ ಅಸ್ತಿತ್ವಕ್ಕೆ ಬರಬೇಕು ಎಂದು ಜನಾದೇಶ ನೀಡಿದ್ದಾರೆ. ರಾಜ್ಯದಲ್ಲಿ ಯಾವ ಸರ್ಕಾರ ಬರಬೇಕು ಎಂದು ಕಳೆದ ವರ್ಷ ಜನಾದೇಶ ಕೊಟ್ಟಿದ್ದಾರೆ. ಹಾಗಾಗಿ ನಾವು ಮೈತ್ರಿ ಸರ್ಕಾರ ಮಾಡಿದ್ದೇವೆ. ಈ ಚುನಾವಣೆಯ ಫಲಿತಾಂಶದಿಂದ ಮೈತ್ರಿ ಸರ್ಕಾರಕ್ಕೆ ಯಾವುದೇ ಸಮಸ್ಯೆಯಾಗುವುದಿಲ್ಲ. ಮುಂದಿನ ನಾಲ್ಕು ವರ್ಷ ಎಚ್.ಡಿ.ಕುಮಾರಸ್ವಾಮಿ ಅವರೆ ಮುಖ್ಯಮಂತ್ರಿಯಾಗಿರುತ್ತಾರೆ. ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ