ಮುಂದಿನ ಐದು ವರ್ಷದಲ್ಲಿ 20 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನೇಮಕ

ಬೆಳಗಾವಿ:

 

     ಮಂದಿನ ಐದು ವರ್ಷದಲ್ಲಿ ರಾಜ್ಯ ಪೊಲಿಸ್ ಇಲಾಖೆಗೆ 20 ಸಾವಿರಕ್ಕಿಂತ ಹೆಚ್ಚು ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಉಪಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ್ ಹೇಳಿದ್ದಾರೆ.

      ಬೆಳಗಾವಿಯಲ್ಲಿಂದು ರಾಜ್ಯ ಮೀಸಲು ತರಬೇತಿ ಶಾಲೆಯಲ್ಲಿ ತರಬೇತಿ ಪಡೆದು ಕರ್ತವ್ಯಕ್ಕೆ ತೆರಳಲು ಸಜ್ಜಾಗಿರುವ 3 ತಂಡಗಳ ಪೇದೆಗಳ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಂಥ ಸಂಚಲನದಲ್ಲಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ಪ್ರಸಕ್ತ ಒಂದು ವರ್ಷದಲ್ಲಿ 4 ಸಾವಿರ ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಇದು ಪ್ರಗತಿಯಲ್ಲಿದೆ. ಕಳೆದ ಐದು ವರ್ಷದಲ್ಲಿ 23 ಸಾವಿರ ಪೊಲೀಸ್ ಸಿಬ್ಬಂದಿಯ ನೇಮಕಾತಿ ಮಾಡಲಾಗಿದೆ ಎಂದರು.

      ಪೊಲೀಸ್ ಸಿಬ್ಬಂದಿಗೆ ಕಡ್ಡಾಯವಾಗಿ ವಸತಿ ಸೌಲಭ್ಯ ದೊರಕಿಸಿಕೊಡಲಾಗುತ್ತಿದ್ದು, ಮೊದಲ ಹಂತದ ಕಾಮಗಾರಿ ಪೂರ್ಣಗೊಳಿಸಿ, ಮನೆಗಳನ್ನು ಒದಗಿಸಲಾಗಿದೆ. ಇಷ್ಟರಲ್ಲೇ ಎರಡನೇ ಹಂತದಲ್ಲಿ 1.06 ಲಕ್ಷ ಸಿಬ್ಬಂದಿಗೆ ವಸತಿ ವ್ಯವಸ್ಥೆ ಕಲ್ಪಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ ಎಂದು ಹೇಳಿದರು. ತರಬೇತಿ ಪಡೆದ ಸಿಬ್ಬಂದಿ ಸಾಮಾಜಿಕ ಸ್ವಾಸ್ಥ್ಯ ಕಾಪಾಡುವ ಜತೆಗೆ ರಾಜ್ಯದ ನೆಲ, ಜಲ ಸಂರಕ್ಷಣೆಗೆ ಮುಂದಾಗಬೇಕು. ಸಂವಿಧಾನದ ಅಡಿಯಲ್ಲಿಯೇ ಕಾನೂನು ಸುವ್ಯವಸ್ಥೆ ರಕ್ಷಿಸಲು ಮುಂದಾಗಬೇಕು ಎಂದು ಪರಮೇಶ್ವರ್ ಕಿವಿ ಮಾತು ಹೇಳಿದರು.

     ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

Recent Articles

spot_img

Related Stories

Share via
Copy link