ಕೊಪ್ಪಳ:
ಸಿದ್ದಗಂಗಾ ಶ್ರೀಗಳಿಗೂ ಭಾರತ ರತ್ನ ಬರುತ್ತದೆ. ಈ ಬಗ್ಗೆ ನಾವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಮಾನಗಳಲ್ಲಿ ಸಿದ್ದಗಂಗಾ ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ಪ್ರಶಸ್ತಿ ಸಿಗಲಿದೆ. ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಈ ಕುರಿತು ಮನವಿ ಮಾಡಲಿದೆ. ಇದರಲ್ಲಿ ಯಾವದೇ
ಗೊಂದಲ ಇಲ್ಲ ಎಂದು ತಿಳಿಸಿದರು.
ಪ್ರಸ್ತುತ ಸಾವರ್ಕರ್ ಅವರಿಗೆ ಭಾರತ ರತ್ನ ನೀಡುವ ವಿಚಾರ ಚರ್ಚೆಯಲ್ಲಿದೆ. ಸಾವರ್ಕರ್ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಜೀವನ ಮುಡಿಪಾಗಿಟ್ಟು ಹೋರಾಡಿದ್ದಾರೆ. ಜೈಲುವಾಸ ಅನುಭವಿಸಿದ್ದಾರೆ. ಅಂತವರನ್ನ ಹೀಯಾಳಿಸಿದರೆ ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡಿದಂತಾಗಲಿದೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
