ಇಂದು ಕೊರಟಗೆರೆಯಲ್ಲಿ ದೇವೇಗೌಡ್ರ ಪರ ಡಿಸಿಎಂ ಪ್ರಚಾರ!

ತುಮಕೂರು :

      ತುಮಕೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪರ ಡಿಸಿಎಂ ಪರಮೇಶ್ವರ್ ಇಂದು ಭರ್ಜರಿ ಪ್ರಚಾರ ನಡೆಸಲಿದ್ದಾರೆ.

      ಲೋಕಸಭಾ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರ ಮೈತ್ರಿ ಅಭ್ಯರ್ಥಿಯಾಗಿರುವ ದೇವೇಗೌಡ ಅವರ ಪರವಾಗಿ ಪರಮೇಶ್ವರ್ ಅವರು ತಮ್ಮ ಸ್ವಕ್ಷೇತ್ರ ಕೊರಟಗೆರೆಯಲ್ಲಿ ಇಂದು ಪ್ರಚಾರ ನಡೆಸಲಿದ್ದಾರೆ. 

      ಬೆಳಗ್ಗೆ 11 ಗಂಟೆಗೆ ಕೊರಟಗೆರೆ ತಾಲೂಕಿನ ಪುರವಾರ ಗ್ರಾಮದಲ್ಲಿ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 12 ಗಂಟೆಗೆ ಪಟ್ಟಣದ ಮಾರುತಿ ಕಲ್ಯಾಣ ಮಂಟಪದಲ್ಲಿ ಕಸಬಾ ಹೋಬಳಿ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ ಹೊಳವನಹಳ್ಳಿ ಹೋಬಳಿ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ಪರಮೇಶ್ವರ್ ಜೊತೆಗೆ ಸಚಿವ ಎಸ್ ಆರ್.ಶ್ರೀನಿವಾಸ್ ಸಾಥ್ ನೀಡಲಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap