ಬೆಂಗಳೂರು :
ಖಡಕ್ ಪೊಲೀಸ್ ಅಧಿಕಾರಿ ಎಂದೇ ಕರೆಸಿಕೊಳ್ಳುವ ಇಶಾ ಪಂತ್ ಅವರ ವರ್ಗಾವಣೆ ರದ್ದು ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.
ಕಳೆದ 3 ದಿನಗಳ ಹಿಂದಷ್ಟೇ ಆಗ್ನೇಯ ವಿಭಾಗದ ಡಿಸಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇಶಾ ಪಂತ್ ಅವರನ್ನು, ಸಿಐಡಿ ಎಸ್ ಪಿ ಆಗಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿತ್ತು. ಆದರೆ, ಇಂದು ರಾಜ್ಯ ಸರ್ಕಾರ ಹೊರಡಿಸಿದ್ದ ಇಶಾ ಪಂತ್ ಅವರ ವರ್ಗಾವಣೆಯನ್ನು ರದ್ದುಗೊಳಿಸಿ, ಆದೇಶ ಹೊರಡಿಸಿದೆ.
ಸಿಐಡಿ ಎಸ್ ಪಿ ಆಗಿ ನೇಮಕಗೊಳಿಸಿ ಆದೇಶ ಹೊಡಿಸಿದ್ದ ವರ್ಗಾವಣೆ ಆದೇಶವನ್ನು ರದ್ದುಗೊಳಿಸಿರುವ ರಾಜ್ಯ ಸರ್ಕಾರ, ಆಗ್ನೇಯ ವಿಭಾಗದ ಡಿಸಿಪಿಯಾಗಿಯೇ ಇಶಾ ಪಂತ್ ಅವರು ಮುಂದುವರೆಸಿ ಆದೇಶ ಹೊರಡಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
