ಬೆಂಗಳೂರು:
ಈ ವರ್ಷ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಬರೆಯುವ ವಿದ್ಯಾರ್ಥಿಗಳಿಗೆ ಪರೀಕ್ಷಾ ದಾಖಲಾತಿ ಶುಲ್ಕವನ್ನು ಕಡಿಮೆ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿರ್ಧರಿಸಿದೆ.
ಕಳೆದ ವರ್ಷ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 500 ರೂ. ಹಾಗೂ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ 650 ರೂ. ಶುಲ್ಕ ನಿಗದಿ ಮಾಡಲಾಗಿತ್ತು. ಈ ವರ್ಷ ಸಿಇಟಿ ಬರೆಯಲಿರುವ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ 250 ರೂ. ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ 500 ರೂ. ಶುಲ್ಕ ನಿಗದಿ ಮಾಡಲಾಗುವುದು ಎಂದು ಪ್ರಾಧಿಕಾರದ ಮೂಲಗಳು ಖಚಿತಪಡಿಸಿವೆ. ಹಾಗೆಯೇ ವಿದ್ಯಾರ್ಥಿನಿಯರಿಗೆ ಸಿಇಟಿ ನೋಂದಣಿ ಶುಲ್ಕದಲ್ಲಿ ಶೇ. 50ರಷ್ಟು ವಿನಾಯಿತಿ ನೀಡುವ ಬಗ್ಗೆಯೂ ಪ್ರಾಧಿಕಾರ ಚಿಂತನೆ ನಡೆಸಿದೆ.
ನಿನ್ನೆ ಉನ್ನತ ಶಿಕ್ಷಣ ಸಚಿವ ಜಿ ಟಿ ದೇವೇಗೌಡ ನೇತೃತ್ವದಲ್ಲಿ ನಡೆದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತ ಮಂಡಳಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
