ಬಾಗಲಕೋಟೆ :
ಬಳ್ಳಾರಿಯನ್ನು ಇಬ್ಭಾಗ ಮಾಡಿ ವಿಜಯನಗರ ರಚನೆ ಮಾಡಲು ರಾಜ್ಯ ಸರಕಾರ ಮುಂದಾಗಿದೆ ಎಂಬ ಪ್ರಸ್ತಾವ ಬಯಲಾಗುತ್ತಿದ್ದಂತೆ ಪರ-ವಿರೋಧ ಕೂಗು ಜೋರಾಯಿತು. ಈಗ ಬಾಗಲಕೋಟೆಯ ಜಮಖಂಡಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಬೇಕೆಂಬ ಕೂಗು ಕೇಳಿಬಂದಿದೆ.
ಜಮಖಂಡಿ ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ನಾಳೆ ಜಮಖಂಡಿ ನಗರ ಬಂದ್ ನಡೆಸಲಾಗುವುದು ಎಂದು ಓಲೆಮಠದ ಚೆನ್ನಬಸವ ಸ್ವಾಮೀಜಿ ತಿಳಿಸಿದ್ದಾರೆ.
ಇನ್ನು ಜಮಖಂಡಿಯಲ್ಲಿ ನಾಳೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಸಂಪೂರ್ಣ ಬಂದ್ ನಡೆಸಲಾಗುವುದು. ಬಸ್ ಸಂಚಾರ, ವ್ಯಾಪಾರ ವಹಿವಾಟು ಸ್ಥಗಿತಗೊಳ್ಳುವುದು, ಜಮಖಂಡಿ ಜಿಲ್ಲೆಗೆ ಆಗ್ರಹಿಸಿ ಪಕ್ಷಾತೀತವಾಗಿ ಹೋರಾಟ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಜಮಖಂಡಿ ಪ್ರತ್ಯೇಕ ಜಿಲ್ಲೆಗೆ 1966 ರಿಂದಲೂ ಬೇಡಿಕೆ ಇದೆ. ಅದರೆ ಸರ್ಕಾರ ಪ್ರತ್ಯೇಕ ಜಿಲ್ಲೆ ಮಾಡುವ ಕಡೆ ಗಮನ ಹರಿಸಿಲ್ಲ. ಜಿಲ್ಲೆಗೆ ಬೇಕಾಗಿರುವ ಮೂಲಭೂತ ಸೌಲಭ್ಯ ಜಮಖಂಡಿಯಲ್ಲೇ ಇದೆ. ಹೀಗಾಗಿ ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಣೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ