ಬೆಂಗಳೂರು :
ಕೊರೊನಾ ಸೋಂಕುಗೆ ತುತ್ತಾಗಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ಅವರು ಕೊರೊನಾದಿಂದ ಗುಣಮುಖರಾಗಿದ್ದು, ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಮಾರ್ಚ್ 31 ರಂದು ದೇವೇಗೌಡ ಮತ್ತು ಪತ್ನಿ ಚೆನ್ನಮ್ಮ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚೆನ್ನಮ್ಮ ಅವರಿಗೆ ಆಸ್ಪತ್ರೆಯಲ್ಲಿ ಇನ್ನೂ ಚಿಕಿತ್ಸೆ ಮುಂದುವರೆದಿದೆ.
ಮಾರ್ಚ್ 31ರಂದು ಜ್ವರದಿಂದ ಬಳಲುತಿದ್ದ ಅವ್ರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಮೊದ ಮೊದಲು ಕೊರೊನಾ ಪಾಸಿಟಿವ್ ಇರುವುದಾಗಿ ಹೇಳಲಾಗಿತ್ತು. ಆದರೆ, ಪರೀಕ್ಷೆಯ ನಂತರ ಕೇವಲ ಜ್ವರ ಇರುವುದು ಕಾಣಿಸಿತ್ತು. ಆದರೆ ದೇವೇಗೌಡರ ಪತ್ನಿ ಚೆನ್ನಮ್ಮ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟ ಕಾರಣ ಇಬ್ಬರನ್ನು ಅಂದೇ ಆಸ್ಪತ್ರೆ ಚಿಕಿತ್ಸೆಗಾಗಿ ರವಾನಿಸಲಾಗಿತ್ತು.
ಇಂದು ದೇವೇಗೌಡ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಚೆನ್ನಮ್ಮ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ