ತುಮಕೂರು:
ತುಮಕೂರಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು ಎದುರು 13 ಸಾವಿರ ಮತಗಳ ಅಂತರದಿಂದ ಸೋಲನ್ನಪ್ಪಿದ್ದಾರೆ.
ಮಾಜಿ ಪ್ರಧಾನಿ, ಜೆಡಿಎಸ್‌ನ ಹೆಚ್.ಡಿ.ದೇವೇಗೌಡರಿಗೆ 5,79,434 ಮತಗಳು, ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು 5,92,621 ಗಳನ್ನು ಪಡೆಯುವ ಮೂಲಕ 13,187 ಮತಗಳ ಅಂತರದಿಂದ ದೊಡ್ಡಗೌಡರನ್ನು, ಜಿ.ಎಸ್.ಬಸವರಾಜು ರವರು ಸೋಲಿಸುವ ಮೂಲಕ ಮುನ್ನಡೆ ಸಾಧಿಸಿ ಗೆಲುವಿನ ನಗೆ ಬೀರಿದ್ದಾರೆ.
ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಗೆದ್ದು ಒಂದಿಷ್ಟು ಖುಷಿಗೆ ಕಾರಣವಾಗಿದ್ದರೆ, ಮತ್ತೊಬ್ಬ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಎದುರು ಸೋತಿದ್ದಾರೆ. ಸ್ವತಃ ದೇವೇಗೌಡರು ತುಮಕೂರಿನಲ್ಲಿ ಸೋಲು ಕಂಡಿರುವುದು ಗೌಡರ ಕುಟುಂಬಕ್ಕೆ ಆಘಾತ ತಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ