ಬೆಂಗಳೂರು:

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನ ಇಲ್ಲಿನ ಅವರ ನಿವಾಸದಲ್ಲಿ ಭೇಟಿಯಾದ ಸಚಿವ ಜಮೀರ್ ಅಹ್ಮದ್ ಖಾನ್, ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧೆಗಿಳಿಯುವಂತೆ ಮನವಿ ಮಾಡಿದ್ದಾರೆ.
ದೇವೇಗೌಡರ ಪದ್ಮನಾಭನಗರ ನಿವಾಸಕ್ಕೆ ತೆರಳಿದ ಜಮೀರ್, ದೊಡ್ಡಗೌಡರನ್ನ ಭೇಟಿ ಮಾಡಿ ಲೋಕಸಭಾ ಚುನಾವಣೆ ಕುರಿತಂತೆ ಮಾತುಕತೆ ನಡೆಸಿದ್ದಾರೆ.

ಈ ವೇಳೆ ಬೆಂಗಳೂರು ಉತ್ತರ ಕ್ಷೇತ್ರದಿಂದ ಕಣಕ್ಕಿಳಿಯುವಂತೆ ಮನವಿ ಮಾಡಿದ್ರು. ಇಷ್ಟು ದಿನ ಕ್ಷೇತ್ರ ಆಯ್ಕೆ ಬಗ್ಗೆ ಗೊಂದಲದಲ್ಲಿದ್ದ ಗೌಡರು ನಿನ್ನೆಯಷ್ಟೇ ತುಮಕೂರು ಕ್ಷೇತ್ರದಿಂದ ಅಖಾಡಕ್ಕಿಳಿಯುವುದಾಗಿ ಸ್ಪಷ್ಟನೆ ನೀಡಿದ್ದರು.
ಆದರೆ ಇದೀಗ ಜಮೀರ್ ಅಹ್ಮದ್ ಅವರು ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








