ಡಿಸೆಂಬರ್ 31ರವರೆಗೆ ಅಂತರಾಷ್ಟ್ರೀಯ ವಿಮಾನ ಸಂಚಾರ ನಿರ್ಬಂಧ!!

ನವದೆಹಲಿ :

    ದಿನೇ ದಿನೇ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಇದನ್ನು ಗಮದಲ್ಲಿಟ್ಟುಕೊಂಡು, ಭಾರತ ಸರ್ಕಾರವು ಡಿಸೆಂಬರ್ 31ರವರೆಗೆ ಅಂತರಾಷ್ಟ್ರೀಯ ವಿಮಾನ ಹಾರಾಟವನ್ನು ನಿಷೇಧಿಸಿದೆ.

     ಇತ್ತೀಚೆಗೆ ನಾಗರಿಕ ವಿಮಾನಯಾನ ನಿರ್ದೇಶಾನಲಯವು ನವೆಂಬರ್ 30ರವರೆಗೆ ಅಂತರಾಷ್ಟ್ರೀಯ ವಿಮಾನಯಾನ ಹಾರಾಟಕ್ಕೆ ನಿರ್ಬಂಧ ಹೇರಿತ್ತು. ಈಗ ಈ ಅವಧಿಯನ್ನು ಡಿಸೆಂಬರ್ 31ರವರೆಗೆ ವಿಸ್ತರಿಸಲಾಗಿದ್ದು, ವಿಮಾನಗಳ ಹಾರಾಟ ಇರುವುದಿಲ್ಲ.

     ಈ ನಿರ್ಬಂಧವು ಎಲ್ಲ ಅಂತಾರಾಷ್ಟ್ರೀಯ ಸರಕು ಸಾಗಣೆ ವಿಮಾನ ಚಟುವಟಿಕೆಗಳಿಗೆ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ನಿರ್ದಿಷ್ಟವಾಗಿ ಅನುಮತಿ ನೀಡಿರುವ ವಿಮಾನಗಳಿಗೆ ಅನ್ವಯವಾಗುವುದಿಲ್ಲ ಎಂದು ಅಧಿಕೃತ ಸುತ್ತೋಲೆ ತಿಳಿಸಿದೆ.

     ಆಯ್ದ ಕೆಲವೇ ಮಾರ್ಗಗಳಲ್ಲಿ ಮಾತ್ರ ವಿಮಾನಗಳು ಹಾರಾಟ ನಡೆಸಲಿವೆ. ಆದರೆ ವಿಶೇಷ ಅಂತರಾಷ್ಟ್ರೀಯ ವಿಮಾನಗಳು ಮೇ ತಿಂಗಳಿನಿಂದ ವಂದೇ ಭಾರತ್ ಮಿಷನ್​ನಡಿ ಕಾರ್ಯಾಚರಣೆ ನಡೆಸುತ್ತಿವೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap