ಸಕಲ ಸರ್ಕಾರಿ ಗೌರವದೊಂದಿಗೆ ಮಾಜಿ ಸಚಿವ ಧನಂಜಯ ಅಂತ್ಯಕ್ರಿಯೆ

      ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ, ಶಾಸಕ ವೇದವ್ಯಾಸ ಕಾಮತ್ ಮತ್ತಿತರರು ಆಗಮಿಸಿ, ಧನಂಜಯ ಕುಮಾರ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. 
      ಬೆಳಗ್ಗೆ 7 ರಿಂದ 10 ಗಂಟೆಯವರೆಗೆ ಮಂಗಳೂರಿನ ಅವರ ನಿವಾಸದಲ್ಲಿ ಗಣ್ಯರ ಅಂತಿಮ ದರ್ಶನದ ಬಳಿಕ ಧನಂಜಯ ಕುಮಾರ್ ಅವರ ಪಾರ್ಥಿವ ಶರೀರವನ್ನು ಅವರ ಹುಟ್ಟೂರಾದ ವೇಣೂರಿಗೆ ತರಲಾಯಿತು.

      ಅಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನಡೆಸಲಾಯಿತು. ಈ ಸಂದರ್ಭ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್, ಮಾಜಿ ಸಚಿವ ರಮಾನಾಥ ರೈ, ವಸಂತ ಬಂಗೇರ ಹಾಗೂ ಧನಂಜಯ ಕುಮಾರ್ ಅವರ ಕುಟುಂಬಸ್ಥರು ಭಾಗವಹಿಸಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link