ಧರ್ಮಸ್ಥಳ ಮಹಾಮಸ್ತಕಾಭಿಷೇಕ : ವೇದಿಕೆ ಕುಸಿದು ಅವಘಡ!!

0
114

ಉಜಿರೆ:

     ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ಧಾರ್ಮಿಕ ಕ್ಷೇತ್ರ ಧರ್ಮಸ್ಥಳ ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕದ ಕಾರ್ಯಗಳು ನಡೆಯುತ್ತಿದ್ದು, ಈ ನಡುವೆ ಬಾಹುಬಲಿ ಬೆಟ್ಟದ ಅಡಿಯಲ್ಲಿ ನಿರ್ಮಿಸಲಾಗಿದ್ದ ವೇದಿಕೆ ಕುಸಿದ ಘಟನೆ ನಡೆದಿದೆ.  

     ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳದ ಬಾಹುಬಲಿಗೆ 4ನೇ ಮಹಾಮಸ್ತಕಾಭಿಷೇಕ ಶನಿವಾರದಿಂದ ಆರಂಭವಾಗಲಿದ್ದು, ಈ ಕಾರಣದಿಂದ ಪಂಚ ಮಹಾವೈಭವ ಹಮ್ಮಿಕೊಳ್ಳಲಾಗಿದೆ. ಈ ವೇಳೆ ಇದ್ದಕ್ಕಿಂದ್ದಂತೆ ವೇದಿಕೆ ಕುಸಿದಿದ್ದು, ಪೆಂಡಾಲ್ ನ ಅಡಿಯಲ್ಲಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. 

      ಘಟನೆಯಿಂದ ಹಲವರಿಗೆ ಗಾಯಗಳಾಗಿದ್ದು, ಘಟನಾ ಸ್ಥಳಕ್ಕೆ ಫೊಲೀಸ್ ಸಿಬ್ಬಂದಿ, ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿದ್ದು ರಕ್ಷಣ ಕಾರ‍್ಯದಲ್ಲಿ ತೊಡಗಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷೆ ಮಾಡಲಾಗುತ್ತಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here