ಬೆಳ್ತಂಗಡಿ :
ಕೊರೊನಾ ವಿರುದ್ಧದ ಹೋರಾಟಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಪ್ರಧಾನಮಂತ್ರಿ ಪರಿಹಾರ ನಿಧಿಗೆ 5 ಕೋಟಿ ರೂ. ದೇಣಿಗೆ ನೀಡಲಾಗಿದೆ.
ಈಗಾಗಲೇ ಸಿನಿಮಾ ನಟರು, ಕ್ರೀಡಾಪಟುಗಳು, ರಾಜಕೀಯ ಮುಖಂಡರು ಸೇರಿದಂತೆ ಹಲವು ಗಣ್ಯರು ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ. ಇದೀಗ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ದೇಣಿಗೆ ನೀಡಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಎಲ್ಲ ಸ್ವಸಹಾಯ ಸಂಘಗಳ ಸದಸ್ಯರು ಶಿಸ್ತನ್ನು ಕಾಪಾಡಿಕೊಳ್ಳಬೇಕು. ಸರ್ಕಾರ ಸೂಚಿಸಿರುವಂತೆ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಲಾಕ್ ಡೌನ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ