84 ನೇ ಕನ್ನಡ ಸಾಹಿತ್ಯ ಪರಿಷತ್ತು : ಅಧ್ಯಕ್ಷರಾಗಿ ಚಂದ್ರಶೇಖರ ಕಂಬಾರ

 ಬೆಂಗಳೂರು:

      ಧಾರವಾಡದಲ್ಲಿ ನಡೆಯಲಿರುವ 84 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಜ್ಞಾನಪೀಠ ಪುರಸ್ಕೃತ ಚಂದ್ರಶೇಖರ ಕಂಬಾರ ಆಯ್ಕೆಯಾಗಿದ್ದಾರೆ.

      ಡಿಸೆಂಬರ್ 7, 8, 9ರಂದು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ, ಈ ಕುರಿತು ಗದಗದಲ್ಲಿ ನಡೆದ ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್ ಅಧಿಕೃತ ಘೋಷಣೆ ಮಾಡಿದ್ದಾರೆ. ಗದಗ ನಗರದಲ್ಲಿ ನಡೆದ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಚಂದ್ರಶೇಖರ ಕಂಬಾರ :

      1937ರ ಜನವರಿ 2ರಂದು ಬೆಳಗಾವಿ ಜಿಲ್ಲೆಯ ಘೋಡಗೇರಿ ಗ್ರಾಮದ ಬಸವಣ್ಣೆಪ್ಪ, ಚೆನ್ನಮ್ಮ ಕಂಬಾರ ದಂಪತಿಗಳ ಪುತ್ರರಾಗಿ ಚಂದ್ರಶೇಖರ ಕಂಬಾರರು ಜನಿಸಿದರು.

ವಿದ್ಯಾಭ್ಯಾಸ ಮತ್ತು ವೃತ್ತಿ:

      ಬೆಳಗಾವಿಯ ಲಿಂಗರಾಜ ಕಾಲೇಜಿನಲ್ಲಿ ಬಿಎ, ಕರ್ನಾಟಕ ವಿವಿ ಯಿಂದ ಎಂಎ ಪದವಿ ಮತ್ತು ಪಿಎಚ್‌ಡಿ ಪಡೆದರು.

      ಬೆಂಗಳೂರು ವಿವಿ ಪ್ರಾಧ್ಯಾಪಕರಾಗಿ, ಜಾನಪದ ಅಕಾಡೆಮಿ ಅಧ್ಯಕ್ಷರಾಗಿ, ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರಾಗಿ, ಹಂಪಿ ಕನ್ನಡ ವಿವಿ ಮೊದಲ ಕುಲಪತಿಗಳಾಗಿ ಕಾರ್ಯ ನಿರ್ವಹಿಸಿದ್ದಾರೆ.

ಪ್ರಶಸ್ತಿ – ಸಾಧನೆ :

      ಕಂಬಾರರು ತಾವೇ ಬರೆದ ಕಾದಂಬರಿಗಳನ್ನು ಚಲನಚಿತ್ರಗಳಾಗಿಸಿದ್ದಾರೆ. ಕರಿಮಾಯಿ, ಸಂಗೀತಾ, ಕಾಡುಕುದುರೆ ಪ್ರಮುಖವಾದುವು. 

      ರಾಜ್ಯೋತ್ಸವ ಪ್ರಶಸ್ತಿ, ಸಿರಿಸಂಪಿಗೆ ನಾಟಕಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 2001ರಲ್ಲಿ ಪದ್ಮಶ್ರೀ, 2004ರಲ್ಲಿ ಕನ್ನಡ ವಿಶ್ವವಿದ್ಯಾಲಯದಿಂದ ನಾಡೋಜ ಪ್ರಶಸ್ತಿ, ಕೇರಳದ ಕುಮಾರನ್ ಆಶಾನ್ ಪ್ರಶಸ್ತಿ, ಠಾಗೋರ್ ಪ್ರಶಸ್ತಿ, 2010ರಲ್ಲಿ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿಗಳು ಅವರ ಮುಡಿಯನ್ನು ಅಲಂಕರಿಸಿವೆ.

             ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link