ಬೆಂಗಳೂರು:
ಸ್ಯಾಂಡಲ್ವುಡ್ನ ಆಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾ ಅವರಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾದ ಒಂದೇ ದಿನದಲ್ಲಿ ಡಿಸ್ಚಾರ್ಜ್ ಆಗಿದ್ದಾರೆ.
ಕೊರೊನಾ ಸೋಂಕು ಇರುವುದು ವೈದ್ಯಕೀಯ ಪರೀಕ್ಷೆ ವೇಳೆ ದೃಢಪಟ್ಟ ಹಿನ್ನೆಲೆಯಲ್ಲಿ ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದ ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾ ಅವರನ್ನು ಒಂದು ದಿನ ಆಸ್ಪತ್ರೆಯಲ್ಲಿ ಇರಿಸಿಕೊಂಡ ನಂತರ ಡಿಸ್ಜಾರ್ಜ್ ಮಾಡಲಾಗಿದೆ.
ಧ್ರುವ ಸರ್ಜಾ ಮತ್ತು ಪ್ರೇರಣಾ ಅವರನ್ನು ಸಾಮಾನ್ಯ ರೋಗ ಲಕ್ಷಣ ಹೊರತುಪಡಿಸಿ ಯಾವುದೇ ಕೊರೊನಾ ಸೋಂಕಿನ ಲಕ್ಷಣಗಳು ಹೆಚ್ಚಾಗಿ ಕಂಡು ಬಾರದ ಹಿನ್ನೆಲೆಯಲ್ಲಿ ಮನೆಯಲ್ಲೇ ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದಾರೆ. 14 ದಿನ ಹೋಂ ಕ್ವಾರಂಟೈನ್ ನಲ್ಲಿ ಇರಲು ವೈದ್ಯರು ಸೂಚಿಸಿದ್ದಾರೆ.
ಧ್ರುವ ಸರ್ಜಾ ಮೊದಲೇ ಈ ವಿಷಯದ ಬಗ್ಗೆ ಎಚ್ಚರಿಕೆ ವಹಿಸಿದ್ದರಿಂದ ಮನೆಯಲ್ಲಿ ಯಾರಿಗೂ ಪಾಸಿಟಿವ್ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಕುಟುಂಬದಲ್ಲಿ ಸ್ವಲ್ಪ ನೆಮ್ಮದಿ ತಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
