ದಿನೇಶ್ ಗುಂಡೂರಾವ್ ರಾಜೀನಾಮೆ!!

ಬೆಂಗಳೂರು :

      ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರವರು ಇಂದು ಬೆಳಗ್ಗೆ ರಾಜೀನಾಮೆ ನೀಡಿದ್ದಾರೆ.

      ಗಾಂಧಿನಗರ ಶಾಸಕ ಹಾಗೂ ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರು ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿಗೆ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.

      2019ರ ಲೋಕಸಭಾ ಚುನಾವಣೆಯಲ್ಲಿನ ಕಾಂಗ್ರೆಸ್​ ಹೀನಾಯ ಸೋಲಿಗೂ ಅವರನ್ನೇ ಹೊಣೆ ಮಾಡಲಾಗಿತ್ತು. ಇದರಿಂದ ಸಾಮಾನ್ಯವಾಗಿ ಬೇಸರಗೊಂಡಿದ್ದ ದಿನೇಶ್ ಗುಂಡೂರಾವ್ ಕಳೆದ ಎರಡು ದಿನಗಳಿಂದ ಕೆಪಿಸಿಸಿ ಕಚೇರಿಗೂ ಆಗಮಿಸಿರಲಿಲ್ಲ. ಅಲ್ಲದೆ ಸಂಪುಟ ವಿಸ್ತರಣೆ ಕಾರ್ಯಕ್ರಮಕ್ಕೂ ಗೈರಾಗಿದ್ದರು. ಕೊನೆಗೂ ಪಕ್ಷದಲ್ಲಿನ ಹಿರಿಯರ ಅಸಹಾರ ಹಾಗೂ ಒಳಬೇಗುದಿಗೆ ಬೇಸತ್ತು ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

     ದಿನೇಶ್ ಗುಂಡೂರಾವ್ ಅವರನ್ನು ಕಳೆದ ರಾಜ್ಯ ವಿಧಾನಸಭಾ ಚುನಾವಣೆಯ ನಂತರ ಜಿ.ಪರಮೇಶ್ವರ್ ಅವರಿಂದ ತೆರವಾದ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ 2018 ರ ಜುಲೈ 4 ರಂದು ನೂತನ ಅಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link