ಬೆಂಗಳೂರು :

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದ್ದು, ಇದಕ್ಕೆ ರಾಜ್ಯ ಕಾಂಗ್ರೆಸ್ ಸ್ಪಷ್ಟನೆ ಟ್ವೀಟರ್ ಮೂಲಕ ಸ್ಪಷ್ಟನೆ ನೀಡಿದೆ.
ರಾಜ್ಯ ಕಾಂಗ್ರೆಸ್ ಟ್ವೀಟರ್ ನಲ್ಲಿ, ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಅವರು ರಾಜೀನಾಮೆ ನೀಡಿದ್ದಾರೆ ಎಂದು ಮಾಧ್ಯಮಗಳಲ್ಲಿ ಇಂದು ಬೆಳಗ್ಗೆ ಬಂದಿದ್ದು, ಇದು ಸತ್ಯಕ್ಕೆ ದೂರ. ಅವರು ಯಾವುದೇ ರಾಜೀನಾಮೆ ನೀಡಿಲ್ಲ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದೆ.
ಕೆಪಿಸಿಸಿ ಅಧ್ಯಕ್ಷರಾದ ಶ್ರೀ ದಿನೇಶ್ ಗುಂಡೂರಾವ್ ರಾಜೀನಾಮೆ ಎಂಬ ಸುದ್ದಿಯು ನಿಮ್ಮ ದೃಶ್ಯ ಮಾಧ್ಯಮದಲ್ಲಿ ಇಂದು ಬೆಳಿಗ್ಗೆ ಬಂದಿದ್ದು ಇದು ಸತ್ಯಕ್ಕೆ ದೂರ. ಅವರು ಯಾವುದೇ ರಾಜೀನಾಮೆ ನೀಡಿಲ್ಲ. ದಯಮಾಡಿ ಈ ರಾಜೀನಾಮೆ ಸುದ್ದಿಗೆ ಕೆಪಿಸಿಸಿ ಕಡೆಯಿಂದ ಸ್ಪಷ್ಟನೆಯನ್ನು ಪ್ರಕಟಿಸಬೇಕಾಗಿ ಮನವಿ.
ಸತ್ಯನ್ ಪೂತ್ತೂರು,
ಪ್ರ.ಕಾ. ಕೆಪಿಸಿಸಿ— Karnataka Congress (@INCKarnataka) June 15, 2019
ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆ ಸೋಲಿನ ಹೊಣೆ ಹೊತ್ತು ದಿನೇಶ್ ಗುಂಡೂರಾವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿತ್ತು. ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿಗೆ ರವಾನಿಸಿದ್ದಾರೆ ಎಂದು ಹೇಳಲಾಗಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








