ದೋಸ್ತಿಗೆ ಮೀರಿ ಬಂಡಾಯವೆದ್ದರೆ ಕಠಿಣ ಕ್ರಮ : ದಿನೇಶ್ ಗುಂಡೂರಾವ್

ಬೆಂಗಳೂರು:

      ಉಪ ಚುನಾವಣೆಯಲ್ಲಿ ಜೆಡಿಎಸ್‌ ಜೊತೆ ಹೊಂದಾಣಿಕೆ ಮಾಡಿಕೊಳ್ಳಲಾಗಿದ್ದು, ಪಕ್ಷದಲ್ಲಿ ಬಂಡಾಯ ಎದ್ದರೆ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ ನೀಡಿದ್ದಾರೆ.

      ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮನಗರದಲ್ಲಿ ಜೆಡಿಎಸ್‌ ಅಭ್ಯರ್ಥಿಗೆ ಬೆಂಬಲ ಸೂಚಿಸುವಂತೆ ಈಗಾಗಲೇ ಹೇಳಿದ್ದೇವೆ. ಅದನ್ನು ಮೀರಿ ಬಂಡಾಯ ಎದ್ದರೆ ಪಕ್ಷ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆಯನ್ನು ನೀಡಿದ್ದಾರೆ

      ಬಳ್ಳಾರಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಯಾರನ್ನೇ ಅಭ್ಯರ್ಥಿಯನ್ನಾಗಿ ಮಾಡಿದರೂ ಎಲ್ಲರೂ ಒಗ್ಗಟ್ಟಾಗಿ ಚುನಾವಣೆ ಎದುರಿಸಲು ನಿರ್ಧರಿಸಿದ್ದಾರೆ. ಅನೇಕ ಆಕಾಂಕ್ಷಿಗಳಿದ್ದಾರೆ. ಅನೇಕ ಶಾಸಕರು ಬೇರೆ ಊರುಗಳಿಗೆ ಹೋಗಿರುವುದರಿಂದ ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕಿರುವುದರಿಂದ ವಿಳಂಬವಾಗುತ್ತಿದೆ ಎಂದು ತಿಳಿಸಿದರು.

      ಶಿವಮೊಗ್ಗದಲ್ಲಿ ಅಭ್ಯರ್ಥಿ ಕೊರತೆಯಿಲ್ಲ. ಮೂರು ನಾಲ್ಕು ತಿಂಗಳಿಗೆ ಚುನಾವಣೆ ಎದುರಿಸಲು ಕೆಲವರಿಗೆ ಆತಂಕ ಇದೆ. ಆದರೆ, ಪಕ್ಷ ಹೇಳಿದರೆ ಸ್ಪರ್ಧಿಸಲು ಯಾರೂ ನಿರಾಕರಿಸವುದಿಲ್ಲ. ಶಿವಮೊಗ್ಗದಲ್ಲಿ ಎಲ್ಲ ಹಂತದಲ್ಲಿಯೂ ಕಾಂಗ್ರೆಸ್‌ ಎರಡನೇ ಸ್ಥಾನದಲ್ಲಿದೆ. ಬಿಜೆಪಿಗೆ ನೇರ ಸ್ಪರ್ಧೆಯೊಡ್ಡುವ ಶಕ್ತಿ ಇದೆ ಎಂದು ಹೇಳಿದರು. ಶಿವಮೊಗ್ಗದಲ್ಲಿ ಕಾಂಗ್ರೆಸ್‌ನಿಂದ ಮಾತ್ರವೇ ಬಿಜೆಪಿ ಎದುರಿಸಲು ಸಾಧ್ಯ ಎಂದು ತಿಳಿಸಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ