ಬೆಂಗಳೂರು :
ರಾಣೆಬೆನ್ನೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪೂಜಾರಗೆ ಕಣಕ್ಕಿಳಿಯಲಿದ್ದಾರೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ಇದನ್ನು ಖಚಿತಪಡಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದಿಂದ ಅರುಣ್‍ಕುಮಾರ್ ಪೂಜಾರ್ ಕಣಕ್ಕಿಳಿಯಲಿದ್ದಾರೆ. ಎಲ್ಲರೂ ಅವರ ಗೆಲುವಿಗೆ ಶ್ರಮಿಸಬೇಕೆಂದು ಸೂಚಿಸಿದರು.
ಇನ್ನು ಬಿಜೆಪಿಗೆ ಸೇರ್ಪಡೆಯಾದರೂ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿದ್ದ ಅನರ್ಹ ಶಾಸಕ ಆರ್.ಶಂಕರ್ ಸದ್ಯ ತಣ್ಣಗಾಗಿದ್ದಾರೆ. ಟಿಕೆಟ್ ನೀಡಿ ಎಂದು ಬಿಎಸ್‌ವೈ ನಿವಾಸದಲ್ಲಿ ಕುಟುಂಬದ ಸದಸ್ಯರು ಹಾಗೂ ಬೆಂಬಲಿಗರೊಂದಿಗೆ ಬೀಡುಬಿಟ್ಟಿದ್ದ ಶಂಕರ್‌ಗೆ ಎಂಎಲ್‌ಸಿ ಮಾಡಿ ಸಚಿವ ಸ್ಥಾನ ನೀಡುವ ಭರವಸೆಯನ್ನು ಸಿಎಂ ನೀಡಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಮಾತಿಗೆ ಒಪ್ಪಿದ್ದೇನೆ. ಯಾರಿಗೆ ಟಿಕೆಟ್ ಕೊಟ್ರು ಕೆಲಸ ಮಾಡ್ತೀನಿ. ಸಿಎಂ ಮಂತ್ರಿ ಮಾಡೋ ಭರವಸೆ ನೀಡಿದ್ದಾರೆ. ಸಿಎಂ ಮಾತು ಒಪ್ಪಿ ಎಂಎಲ್ ಸಿ ಆಗುತ್ತೇನೆ ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
