ಬೆಂಗಳೂರು :
ಅನರ್ಹ ಶಾಸಕರ ಕುರಿತ ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಅನರ್ಹ ಶಾಸಕರು ಇಂದು ಅಧಿಕೃತವಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಬಿಜೆಪಿ ರಾಜ್ಯ ಉಸ್ತುವಾರಿ ಮುರುಳೀಧರ್ ಅವರ ನೇತೃತ್ವದಲ್ಲಿ ಪಕ್ಷದ ಧ್ವಜ ನೀಡಿ, ಶಾಲು ಹೊದಿಸಿ ಅನರ್ಹ ಶಾಸಕರನ್ನು ಬಿಜೆಪಿಗೆ ಸ್ವಾಗತಿಸಲಾಗಿದೆ.
Bengaluru: 15 rebel Karnataka MLAs of Congress and JD(S) joined BJP today in the presence of Chief Minister BS Yediyurappa. 17 MLAs were disqualified by the state assembly speaker KR Ramesh Kumar and their disqualification was upheld by the Supreme Court, yesterday. pic.twitter.com/xznVMPKWaQ
— ANI (@ANI) November 14, 2019
ಭೈರತಿ ಬಸವರಾಜು, ಬಿ.ಸಿ.ಪಾಟೀಲ್, ಎಸ್.ಟಿ.ಸೋಮಶೇಖರ್, ರಮೇಶ್ ಜಾರಕಿಹೊಳಿ, ಮುನಿರತ್ನ, ಆನಂದ್ ಸಿಂಗ್, ಹೆಚ್.ವಿಶ್ವನಾಥ್, ಮಹೇಶ್ ಕಮಟಳ್ಳಿ, ಪ್ರತಾಪ್ ಗೌಡ ಪಾಟೀಲ್, ಹೆಚ್.ಸುಧಾಕರ್, ಶಿವರಾಜ್ ಹೆಬ್ಬಾರ್, ಶ್ರೀಮಂತ್ ಪಾಟೀಲ್, ಎಂಟಿಬಿ ನಾಗರಾಜ್, ಕೆ.ಗೋಪಾಲಯ್ಯ, ಕೆ.ಸಿ. ನಾರಾಯಣಗೌಡ ಮತ್ತು ಆರ್. ಶಂಕರ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಬಿಜೆಪಿ ಕಚೇರಿಗೆ ಬಂದ ಅನರ್ಹರಿಗೆ ಪಕ್ಷ ಸೇರ್ಪಡನೆಗೆ ಮುನ್ನವೇ ಸದಸ್ಯತ್ವದ ಫಾರ್ಮ್ ನೀಡಿ ಸಹಿ ಹಾಕಿಸಿಕೊಳ್ಳಲಾಯಿತು. ಬಳಿಕ ನಾಯಕರು ಅವರನ್ನು ವೇದಿಕೆ ಮೇಲೆ ಪಕ್ಷದ ಬಾವುಟ ನೀಡಿ ಸ್ವಾಗತಿಸಿದರು.
17 ಶಾಸಕರನ್ನು ರಾಜ್ಯ ವಿಧಾನಸಭಾ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಅನರ್ಹಗೊಳಿಸಿದ್ದಾರೆ ಮತ್ತು ಅವರ ಅನರ್ಹತೆಯನ್ನು ಸುಪ್ರೀಂ ಕೋರ್ಟ್ ನಿನ್ನೆ ಎತ್ತಿಹಿಡಿದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ