ನವದೆಹಲಿ :
ಅನರ್ಹ ಶಾಸಕರ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ಮಾಡಿರುವ ಮೂಲಕ ಅನರ್ಹ ಶಾಸಕರಿಗೆ ಬಿಗ್ ಶಾಕ್ ನೀಡಿದೆ.
ಶಾಸಕರ ಅನರ್ಹತೆ ಪ್ರಶ್ನಿಸಿ ತುರ್ತು ವಿಚಾರಣೆಗೆ ಅರ್ಜಿ ಸಲ್ಲಿಸಿದ ವಕೀಲ ಮುಕುಲ್ ರೊಹ್ಟಗಿ ನ್ಯಾ. ಎನ್.ವಿ. ರಮಣ ನೇತೃತ್ವದ ದ್ವಿಸದಸ್ಯ ಪೀಠದ ಮುಂದೆ ಮನವಿ ಮಾಡಿಕೊಂಡಿದ್ದಾರೆ. ಆದರೆ ಅನರ್ಹತೆ ಪ್ರಶ್ನಿಸಿ ಅರ್ಜಿ ತುರ್ತು ವಿಚಾರಣೆಗೆ ಸಂಬಂಧಪಟ್ಟಂತೆ ತುರ್ತು ವಿಚಾರಣೆ ಮಾಡುವುದಕ್ಕೆ ನ್ಯಾಯಾಧೀಶರು ನಕಾರ ವ್ಯಕ್ತಪಡಿಸಿದ್ದಾರೆ.
ಕಡೆ ಕ್ಷಣದಲ್ಲಿ ಅರ್ಜಿ ಮೆನ್ಷನ್ ಮಾಡಲು ಅನರ್ಹ ಶಾಸಕರ ಪರ ವಕೀಲ ಮುಕುಲ್ ರೋಹ್ಟಗಿ ಹಿಂದೇಟು ಹಾಕಿದ್ದು, ನಾಳೆ ವಿಚಾರಣೆಗೆ ಬರಬಹುದು, ಕಾದುನೋಡಣ ಎಂದ ತಿಳಿಸಿದ್ದಾರೆ.
ಅಯೋಧ್ಯೆ ಪ್ರಕರಣದ ಸುದೀರ್ಘ ವಿಚಾರಣೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ನ್ಯಾ.ಎನ್ ವಿ ರಮಣ ಪೀಠಕ್ಕೆ ಪ್ರಕರಣ ವರ್ಗಾಯಿಸಲಾಯಿತು ಎನ್ನಲಾಗಿದೆ.
ಇದರಿಂದಾಗಿ ತಮ್ಮನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದ ಅನರ್ಹಗೊಂಡ ಶಾಸಕರಿಗೆ ಭಾರಿ ಮುಖಭಂಗವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ